ನ.೨೪ ರಂದು ಎಂಬಿಎ ಮಹಾವಿದ್ಯಾಲಯಕ್ಕೆ ರಜತ ಸಂಭ್ರಮ

bkt-22-5
ಬಾಗಲಕೋಟೆ ನಗರದ ಬಿವಿವಿ ಸಂಘದ ಮಿನಿ ಸಭಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಬಿವಿವಿ ಸಂಘದ ಕಾರ್ಯಾಧ್ಯಕ್ಷ, ಮಾಜಿ ಶಾಸಕ ವೀರಣ್ಣ ಚರಂತಿಮಠ ಮಾತನಾಡಿದರು. ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಗುರುಬಸವ ಸೂಳಿಭಾವಿ,ಡಾ.ಪ್ರಕಾಶ ವಡವಡಗಿ ಇದ್ದರು.
Published on

ಬಾಗಲಕೋಟೆ: ಇಲ್ಲಿನ ಪ್ರತಿಷ್ಠಿತ ಬಿವಿವಿ ಸಂಘದ ಇನ್ಸಿಟ್ಯೂಟ್ ಆಫ್ ಮ್ಯಾನೇಜಮೆಂಟ್ ಸ್ಟಡೀಸ್ (ಎಂಬಿಎ ಮಹಾವಿದ್ಯಾಲಯ) ರಜತ ಮಹೋತ್ಸವ ಸಂಭ್ರಮ ನ.೨೪ ರಂದು ಬೆಳಗ್ಗೆ ೧೦ ಗಂಟೆಗೆ ಬಿಮ್ಸ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷ, ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.

ನಗರದ ಬಿವಿವಿ ಸಂಘದ ಮಿನಿ ಸಭಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಎಫ್.ಕೆ.ಸಿ.ಸಿಐ ಹಿರಿಯ ಉಪಾಧ್ಯಕ್ಷ, ಹೈಟೆಕ್ ಇಲೆಕ್ಟ್ರಾನಿಕ್ಸ್ ಪ್ರÊೆ.ವ್ಯವಸ್ಥಾಪಕ ನಿರ್ದೇಶಕಿ ಉಮಾ ರೆಡ್ಡಿ ಆಗಮಿಸಲಿದ್ದಾರೆ. ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಗುರುಬಸವ ಸೂಳಿಭಾವಿ ಉಪಸ್ಥಿತಿರುವರು. ೨೫ನೇ ವರ್ಷದ ಸ್ಮರಣೆಗಾಗಿ ಬಿಮ್ಸ್ ಆರೋಹಣ ಎಂಬ ನೆನಪಿನ ಸಂಚಿಕೆಯನ್ನು ಹೊರತಲಾಗುತ್ತಿದೆ. ವಿವಿಧ ವಿಚಾರಗೋಷ್ಠಿ, ಸಾಂಸ್ಕೃಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

೧೯೯೮ ರಲ್ಲಿ (ಬಿಮ್ಸ್) ಎಂಬಿಎ ಕಾಲೇಜು ಆರಂಭಗೊಂಡಿತು. ಬಾಗಲಕೋಟೆ ನಗರದ ವಿದ್ಯಾಗಿರಿಯಲ್ಲಿ ೫ ಎಕರೆ ಜಾಗೆಯಲ್ಲಿ ಬಿಮ್ಸ್ ಎಂಬಿಎ ಮಹಾವಿದ್ಯಾಲಯ ನಿರ್ಮಾಣವಾಗಿದೆ. ಕಾಲೇಜು ಸುಸಜ್ಜಿತ ಕಟ್ಟಡ, ವಿದ್ಯಾರ್ಥಿಗಳಿಗೆ ಬೇಕಾವಂತ ಸೌಲಭ್ಯವನ್ನು ಕಲ್ಪಿಸಲಾಗಿದೆ. ಮಹಾವಿದ್ಯಾಲಯವು ತನ್ನ ೨೫ ವರ್ಷಗಳ ಅವಽಯಲ್ಲಿ ೧೧ ರ‍್ಯಾಂಕ್‌ಗಳನ್ನು ವಿಶ್ವವಿದ್ಯಾಲಯಗಳಿಗೆ ನೀಡಿದ್ದು ಸಂಸ್ಥೆಯ ಗುಣಮಟ್ಟಕ್ಕೆ ನಿದರ್ಶನವಾಗಿದೆ ಎಂದು ತಿಳಿಸಿದರು.

ಸಹಸ್ರಾರು ವಿದ್ಯಾರ್ಥಿಗಳು ಎಂಬಿಎ ಸ್ನಾತಕೋತ್ತರ ಪದವಿ ಪಡೆದು ರಾಜ್ಯ,ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸರ್ಕಾರಿ, ಬ್ಯಾಂಕ್, ಸಹಕಾರ, ಖಾಸಗಿ ಮತ್ತು ಸ್ವಂತ ವ್ಯಾಪಾರ ಉದ್ದಿಮೆಗಳಲ್ಲಿ ಬಿಮ್ಸ್ ಸಂಸ್ಥೆಯ ವಿದ್ಯಾರ್ಥಿಗಳು ಸಕ್ರೀಯವಾಗಿ ತೊಡಗಿಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಬಿಮ್ಸ್ ಮಹಾವಿದ್ಯಾಲಯವು ವಿದ್ಯಾರ್ಥಿಗಳಲ್ಲಿ ಸಂಶೋಧನ ಅಧ್ಯಯನದ ಮನೋಭಾವ ಮೂಡಿಸುವ ನಿಟ್ಟಿನಲ್ಲಿ ಬಾಗಲಕೋಟೆ ವಿಶ್ವವಿದ್ಯಾಲಯದ ಸಂಶೋಧನಾ ಕೇಂದ್ರವಾಗಿ ರೂಪಗೊಳ್ಳುತ್ತಿರುವುದು, ವಿದ್ಯಾರ್ಥಿಗಳ ಅಧ್ಯಯನದ ದೃಷ್ಠಿಯಿಂದ ತುಂಬಾ ಮಹತ್ವದ ಹೆಜ್ಜೆಗುರುತಾಗಿದೆ ಎಂದು ಹೇಳಿದರು.

ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಗುರುಬಸವ ಸೂಳಿಭಾವಿ,ಡಾ.ಪ್ರಕಾಶ ವಡವಡಗಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net