

ಬೇಲೂರು: ತಾಲೂಕಿನ ದೊಡ್ಡಿಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀಬಸವೇಶ್ವರ ದೇವಸ್ಥಾನ ಹಾಗೂ ಶ್ರೀ ಕರಿ ವೃಷಭ ದೇಶಿಕೇಂದ್ರ ಮಹಾ ಸ್ವಾಮೀಜಿಯವರ ಗದ್ದುಗೆ ಉದ್ಘಾಟನೆಗಾಗಿ ಪೂಜಿಸಲು ಕರೆ ತಂದಿದ್ದ ಸೋಂಪುರ ಗ್ರಾಮದ ಶ್ರೀ ನಂಜುಂಡೇಶ್ವರ ದೇವರ ಕೊಂಡೋತ್ಸವವು ಗ್ರಾಮದಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ ಮಂಗಳವಾರ ಅದ್ದೂರಿಯಾಗಿ ನೆರವೇರಿತು.
ಕೊಂಡೋತ್ಸವದ ಅಂಗವಾಗಿ ದೇಗುಲದಲ್ಲಿ ವಿಶೇಷ ಪೂಜೆ ಪುನಸ್ಕಾರಗಳನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಅರ್ಚಕರು ನೆರವೇರಿಸಿದರು.