ನಂಬರ್ ಪ್ಲೇಟ್ ಇಲ್ಲದ ಬೈಕ್‌ಗಳ ವಶ

1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಧಾರವಾಡ ಸಂಚಾರಿ ಠಾಣೆ ಪೊಲೀಸರು ನಗರದಲ್ಲಿ ಸೋಮವಾರ ಕಾರ್ಯಾಚರಣೆ ನಡೆಸಿ ನೋಂದಣಿ ಸಂಖ್ಯೆಯ ಫಲಕ ಇಲ್ಲದ ೨೦ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದರು. ಇನ್‌ಸ್ಪೆಕ್ಟರ್ ಮಲ್ಲನಗೌಡ ನಾಯ್ಕರ ಮಾರ್ಗದರ್ಶನದಲ್ಲಿ ಎಎಸ್‌ಐಗಳಾದ ವೀರೇಶ ಬಳ್ಳಾರಿ, ಸೀತಾ ಕಟಗಿ, ವೈ.ಡಿ. ಬೀದರ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net