ನಕಲಿ ಏಜೆನ್ಸಿಗಳ ಬಗ್ಗೆ ಜಾಗರೂಕರಾಗಿರಿ

Oplus_131072
Oplus_131072
Published on

ವಿರಾಜಪೇಟೆ: ವಿರಾಜಪೇಟೆ ಸೇಂಟ್ ಆನ್ಸ್ ಪದವಿ ಕಾಲೇಜಿನ ಅಂತಿಮ ಬಿಸಿಎ ವಿದ್ಯಾರ್ಥಿಗಳಿಗೆ ವೃತ್ತಿಯಾಧಾರಿತ ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿತ್ತು.

ಮೂಲತಃ ಕೊಡಗು ಜಿಲ್ಲೆಯವರಾದ ನ್ಯೂಜಿಲ್ಯಾಂಡ್‌ನ ಗ್ಯಾರೆಂಟೆಡ್ ಪ್ರೋ ಸಿಸ್ಟಮ್ಸ್ನ ಜನರಲ್ ಮ್ಯಾನೇಜರ್ ಕಾರ್ಯಪ್ಪ ಕರಂಬಯ್ಯ ಅವರು ವಿದ್ಯಾರ್ಥಿಗಳಿಗೆ ವೃತ್ತಿ ತರಬೇತಿ ಹಾಗೂ ಮಾರ್ಗದರ್ಶನ ಕುರಿತು ಮಾಹಿತಿ ನೀಡಿದರು.

ಭವಿಷ್ಯದಲ್ಲಿ ಉತ್ತಮ ಶೈಕ್ಷಣಿಕ ತರಬೇತಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವಕಾಶವಿದೆ. ಸೂಕ್ತ ತರಬೇತಿ ಪಡೆದುಕೊಂಡಾಗ ಮಾತ್ರ ನಿರ್ದಿಷ್ಟ ಗುರಿ ತಲುಪಲು ಸಾಧ್ಯ. ದೇಶದ ಹೊರಗಡೆ ವೃತ್ತಿಗೆ ತೆರಳುವಾಗ ನಕಲಿ ಏಜೆನ್ಸಿಗಳ ಬಗ್ಗೆ ಜಾಗರೂಕರಾಗಿರಬೇಕು ಎಂದ ಅವರು, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಹಾಗೂ ಮಷಿನ್ ಲರ್ನಿಂಗ್‌ನಂತಹ ನೂತನ ಮಾದರಿಗಳ ಬಗ್ಗೆ ಮಾಹಿತಿ ನೀಡಿದರು.

ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಪ್ರಸ್ತುತದಲ್ಲಿ ಉದ್ಯೋಗವನ್ನು ಪಡೆಯಲು ವೃತ್ತಿ ತರಬೇತಿ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಇದೆ. ತಮ್ಮ ಭವಿಷ್ಯವನ್ನು ತಾವೇ ನಿರ್ಧರಿಸಿಕೊಳ್ಳಬೇಕು ಎಂದರು.

ಬಿಸಿಎ ವಿಭಾಗದ ಮುಖ್ಯಸ್ಥೆ ಸೌಮ್ಯಾ ಸೋಮರಾಜ್, ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net