

ಶಿಡ್ಲಘಟ್ಟ : ತಾಲೂಕಿನ ತಾದೂರು ರೇಷ್ಮೆ ಸಾಕಾಣಿಕೆ ಮನೆಯೊಂದರಲ್ಲಿ ನಕಲಿ ಮದ್ಯ ತಯಾರಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಭಾನುವಾರ ಮುಂಜಾನೆ ದಾಳಿ ನಡೆಸಿದ ಅಬಕಾರಿ ಇಲಾಖೆ ಸಿಬ್ಬಂದಿ ಸುಮಾರು 10 ಲಕ್ಷ ರೂ.ಬೆಲೆ ಬಾಳುವ ನಕಲಿ ಮದ್ಯ ವಶಪಡಿಸಿಕೊಂಡಿದ್ದು ಟಿ.ಎಂ.ಮಂಜುನಾಥ್ ಎಂಬಾತನನ್ನು ಬಂಧಿಸಿದ್ದಾರೆ.
ಅಬಕಾರಿ ಉಪ ಆಯುಕ್ತ ಜಿ.ಪಿ.ನರೇಂದ್ರಕುಮಾರ್ ನೇತೃತ್ವದ ಅಬಕಾರಿ ಇಲಾಖೆ ಸಿಬ್ಬಂದಿ ಭಾನುವಾರ ಮುಂಜಾನೆ ನಕಲಿ ಮದ್ಯ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ 1290 ಲೀ ಸ್ಪಿರಿಟ್ ಸೇರಿ 62 ಲೀ ಬ್ಲೆಂಡ್, 32 ಕೆಜಿ ಕ್ಯಾಪ್, ಲೇಬಲ್ ಹಾಗೂ ತಯಾರಿಸಿಟ್ಟಿದ್ದ 37.800 ಲೀ ನಷ್ಟು ನಕಲಿ ಮದ್ಯ ವಶಪಡಿಸಿಕೊಂಡಿದ್ದಾರೆ.
ಅಬಕಾರಿ ಇನ್‌ಸ್ಪೆಕ್ಟರ್ ವಿಶ್ವನಾಥಬಾಬು, ಫಿರೋಜ್‌ಖಾನ್, ಲಂಕೇ ಹನುಮಯ್ಯ, ಶಂಕರಪ್ರಸಾದ್, ಮಂಜುಳಾ, ಸಿಬ್ಬಂದಿ ನಿತಿನ್, ರಾಘವೇಂದ್ರ, ಕರಿಲಿಂಗ, ಪ್ರಶಾಂತ್, ರಾಘವೇಂದ್ರ ಪಾಟೀಲ್ ಮತ್ತಿತರರು ಹಾಜರಿದ್ದರು.