ನಕಲುಮುಕ್ತ ನಡೆಸಲು ಕಟ್ಟೆಚ್ಚರ ವಹಿಸಿ

Exam
Published on

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಶನಿವಾರ ಮತ್ತು ಭಾನುವಾರ ಗ್ರಾಮ ಆಡಳಿತಾಧಿಕಾರಿ ಹುದ್ದೆ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ನಕಲುಮುಕ್ತ ನಡೆಸಲು ಕಟ್ಟೆಚ್ಚರ ವಹಿಸಬೇಕು ಎಂದು ಡಿಸಿ ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಡಿಸಿ ಕಚೇರಿ ಸಭಾಂಗಣದಲ್ಲಿ ಗುರುವಾರ ಪೂರ್ವಸಿದ್ಧತಾ ಸಭೆ ನಡೆಸಿದ ಅವರು, ಶನಿವಾರ ನಗರದ ೧೧ ಕೇಂದ್ರಗಳಲ್ಲಿ ೪,೪೧೬ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಭಾನುವಾರ ನಗರದ ೪೨ ಮತ್ತು ತಾಲೂಕು ಕೇಂದ್ರ ೩೨ ಸೇರಿ ೭೪ ಕೇಂದ್ರಗಳಲ್ಲಿ ೨೩,೩೧೧ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿದ್ದಾರೆ ಎಂದರು.

ಪರೀಕ್ಷೆಗೆ ಮುನ್ನ ಕೇಂದ್ರದ ಮುಖ್ಯಸ್ಥರು ಬೆಳಕು, ಕುಡಿಯುವ ನೀರು, ಶೌಚಗೃಹ, ವಿದ್ಯುತ್ ವ್ಯವಸ್ಥೆ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಪ್ರತಿ ಕೇಂದ್ರದಲ್ಲಿ ಅಭ್ಯರ್ಥಿಗಳ ಪ್ರವೇಶಕ್ಕೆ ಮುನ್ನ ಸೂಕ್ತ ತಪಾಸಣೆ ಮಾಡಲು ಪುರುಷ, ಮಹಿಳಾ ಪೊಲೀಸ್ ಪೇದೆಗಳನ್ನು ನಿಯೋಜಿಸಬೇಕು. ಲೋಪಗಳಾದಲ್ಲಿ ಸಂಬAಧಿಸಿದ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮ ಜರುಗಿಸಲಾಗುವುದು. ಪರೀಕ್ಷೆ ದಿನ ಕೇಂದ್ರದ ೨೦೦ ಮೀಟರ್ ಸುತ್ತ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ತಿಳಿಸಿದರು.

ಪರೀಕ್ಷೆ ಸುಸೂತ್ರ ನಡೆಯಲು ಪ್ರತಿ ಕೇಂದ್ರಕ್ಕೆ ಉಪ ಮುಖ್ಯ ಅಧೀಕ್ಷಕರು, ವೀಕ್ಷಕರು, ಪ್ರಶ್ನೆಪತ್ರಿಕೆ ಪಾಲಕರು, ವಿಶೇಷ ಜಾಗೃತ ದಳ ಸದಸ್ಯರು, ಪತ್ರಿಕೆ ಸಾಗಿಸಲು ರೂಟ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.

ಡಿಸಿಪಿ ಕನಿಕಾ ಸಿಕ್ರಿವಾಲ್, ಅಪರ ಡಿಸಿ ರಾಯಪ್ಪ ಹುಣಸಗಿ, ಹೆಚ್ಚುವರಿ ಎಸ್‌ಪಿ ಶ್ರೀನಿಧಿ, ಪಿಯು ಡಿಡಿ ಶಿವಶರಣಪ್ಪ ಮುಳೆಗಾಂವ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net