

ಕಡೂರು: ಕಡೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನಗದಿಯಾತ್ ಕಾವಲು ಕೈಗಾರಿಕಾ ಪ್ರದೇಶದಲ್ಲಿ ಆರಂಭವಾಗಲಿರುವ ಗಾರ್ಮೆಂಟ್ಸ್ ್ಯಾಕ್ಟರಿ ಕಡೂರಿನ ನಿರುದ್ಯೋಗ ಸಮಸ್ಯೆಯ ಪರಿಹಾರದ ನಿಟ್ಟಿನಲ್ಲಿ ಗಣನೀಯ ಪಾತ್ರ ವಹಿಸಲಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
ಕಡೂರಿನ ನಗದಿಯಾತ್ ಕಾವಲಿನ ಕೈಗಾರಿಕಾ ಪ್ರದೇಶವನ್ನು ಬುಧವಾರ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿ, ನಗದಿಯಾತ್ ಕಾವಲಿನಲ್ಲಿ 263 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪ್ರದೇಶ ಅಭಿವೃದ್ಧಿಯಾಗುತ್ತಿದೆ. ಕೈಗಾರಿಕಾ ಪ್ರದೇಶದಲ್ಲಿ ವಿವಿಧ ಕೈಗಾರಿಕೆಗಳು ಆರಂಭವಾಗುವ ಮೂಲಕ ಕಡೂರು ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದರು.
ತಾಲೂಕಿನ ಜ್ವಲಂತ ಸಮಸ್ಯೆಗಳಲ್ಲಿ ನಿರುದ್ಯೋಗವೂ ಒಂದಾಗಿತ್ತು. ನಿರುದ್ಯೋಗ ಸಮಸ್ಯೆ ಪರಿಹರಿಸುವಲ್ಲಿ ಆದ್ಯತೆ ನೀಡುತ್ತೇನೆಂದು ವಿಧಾನಸಭಾ ಚುನಾವಣಾ ಪ್ರಚಾರದ ವೇಳೆಯಲ್ಲಿ ಜನತೆಗೆ ಮಾತು ಕೊಟ್ಟಿದ್ದೆ. ಶಾಸಕನಾದ ಕೂಡಲೇ ಬೆಂಗಳೂರಿನಲ್ಲಿ ಹಲವಾರು ಗಾರ್ಮೆಂಟ್ಸ್ ಕಾರ್ಖಾನೆಗಳಿಗೆ ಭೇಟಿ ನೀಡಿದೆ. ಬೆಂಗಳೂರಿನ ಪ್ರತಿಷ್ಠಿತ ಮ್ಯಾಪ್ ಗಾರ್ಮೆಂಟ್ಸ್ ಸಂಸ್ಥೆಯೊಡನೆ ಚರ್ಚಿಸಿದ ಬಳಿಕ ಸಂಸ್ಥೆಯು ಸಕಾರಾತ್ಮಕವಾಗಿ ಸ್ಪಂದಿಸಿ ಕಡೂರಿನಲ್ಲಿ ಗಾರ್ಮೆಂಟ್ಸ್ ಆರಂಭಕ್ಕೆ ಒಲವು ತೋರಿದರು. ಈ ಕುರಿತು ಮುಖ್ಯಮಂತ್ರಿ ಸಹಕಾರ ಪಡೆದು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಾಜೇಂದ್ರ ಸಿಂಗ್ ಕಟಾರಿಯಾ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದರ ಲವಾಗಿ ಇಲ್ಲಿ ಆ ಸಂಸ್ಥೆಯಿಂದ 11 ಕೋಟಿ ರೂ. ಕಟ್ಟಿಸಿಕೊಂಡು 20 ಎಕರೆ ಜಾಗ ಮಂಜೂರು ಮಾಡಲಾಗಿದೆ. ದೊಡ್ಡ ಪ್ರಮಾಣದ ಗಾರ್ಮೆಂಟ್ಸ್ ಆರಂಭವಾಗಲಿದೆ. ಸುಮಾರು 5 ಸಾವಿರ ಮಂದಿಗೆ ಉದ್ಯೋಗ ದೊರೆಯಲಿದೆ. ಬಯಲು ಭಾಗದ ಮಹಿಳೆಯರು ಉದ್ಯೋಗ ಅರಸಿ ಬೇರೆಡೆಗೆ ಹೋಗುವುದು ಗಣನೀಯವಾಗಿ ಕಡಿಮೆಯಾಗಲಿದೆ ಎಂದರು. ರವಿ, ಪಿಎಸ್‌ಐ ಪವನ್‌ಕುಮಾರ್, ಪ್ರಕಾಶ್, ಮಂಜುನಾಥ್ ಇದ್ದರು.