ನಗರ ಸಾರಿಗೆ ಬಸ್‍ ಗಳ ಸೇವೆ ಒದಗಿಸಿ

EBVP
Published on


ಯಾದಗಿರಿ: ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗೆ ನಗರ ಸಾರಿಗೆ ಬಸ್‍ ಗಳ ಸೇವೆ ಒದಗಿಸುವಂತೆ ಆಗ್ರಹಿಸಿ ಗುರುವಾರ ಇಲ್ಲಿನ ಕೇಂದ್ರ ಬಸ್ನಿಲ್ದಾಣದ ಮುಂದೆ ಎಬಿವಿಪಿ ಸಂಘಟನೆಯ ನಗರ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.


ಜಿಲ್ಲಾ ಪ್ರಮುಖ ಡಾ.ಕೃಷ್ಣಮೂರ್ತಿ ಕುಲಕರ್ಣಿ,ಮಾತನಾಡಿ, ಗ್ರಾಮೀಣ ಪ್ರದೇಶದಿಂದ ನಗರಕ್ಕೆ ಆಗಮಿಸುವವಿದ್ಯಾರ್ಥಿಗಳಿಗೆ ನಗರದಲ್ಲಿ ಸಮರ್ಪಕ ನಗರ ಸಾರಿಗೆ ಸೌಲತ್ತು ಇಲ್ಲದಿರುವುದರಿಂದ ಸಮಸ್ಯೆಯಾಗಿದೆ. ಇದರಿಂದಾಗಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಸುಮಾರು ಐದಾರು ಕಿ.ಮೀಟರ್ ದೂರದಷ್ಟು ನಡೆದುಕೊಂಡೇ ಹೋಗುವ ಪರಿಸ್ಥಿತಿ ಇದೆ ಎಂದು ಆರೋಪಿಸಿದರು.

ಜಿಲ್ಲಾ ಸಂಚಾಲಕ ಅಶೋಕ ಗುತ್ತೇದಾರ ಮಾತನಾಡಿ, ಕರೊನಾ ಹಿನ್ನೆಲೆಯಲ್ಲಿ ಕಳೆದ 2 ವರ್ಷಗಳಿಂದ ಶಾಲಾ, ಕಾಲೇಜುಗಳು ಬಂದ್ ಆಗಿದ್ದವು. ಇದರಿಂದ ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಪೆಟ್ಟು ಬಿದ್ದಿತ್ತು. ಇದೀಗ ಕಾಲೇಜುಗಳು ಆರಂಭಗೊಂಡಿದ್ದು, ಕೂಡಲೇ ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಬಸ್ಗಳ ಸೌಲಭ್ಯವನ್ನು ವಿದ್ಯಾರ್ಥಿಗಳ ಅನುಕೂಲಕ್ಕೆ ಒದಗಿಸಬೇಕು ಎಂದು ಆಗ್ರಹಿಸಿದರು.ನಗರ ಕಾರ್ಯದರ್ಶಿಬಸವರಾಜ ಎಸ್. ನಕ್ಕಲ್, ಸುರೇಶ, ರಾಮು, ಗವಿಲಿಂಗ, ದೇವಿಂದ್ರಪ್ಪ, ಮೌನೇಶ, ವೀರೇಶ, ಮೌನೇಶ, ವಿಶ್ವ, ಗಿರೀಶ, ಕುಮಾರ, ಆನಂದ, ರಾಜಶೇಖರ, ಶಿಲ್ಪಾ, ಸವಿತಾ, ಮೇಘಾ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net