

ಮೈಸೂರು: ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಮಿತಿಯ ಉಸ್ತುವಾರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರದ ಲಲಿತ ಪ್ರೌಢಶಾಲೆಯಲ್ಲಿ ಶುಕ್ರವಾರ ವಿಜ್ಞಾನ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.
ಶಾಲೆಯ ವಿದ್ಯಾರ್ಥಿಗಳು 5 ಡಜನ್‌ನಷ್ಟು ವಿಜ್ಞಾನದ ಮಾದರಿಯನ್ನು ತಯಾರಿಸಿ ಪ್ರದರ್ಶನ ಮಾಡಿದರು. ನೀರಿನ ಸಂರಕ್ಷಣೆ, ಪರಿಸರ ಸಂರಕ್ಷಣೆ, ಪರಿಸರ ನಾಶದಿಂದ ಆಗುವ ವಿನಾಶಗಳು, ಜಾಗತಿಕ ತಾಪಮಾನ ಏರಿಕೆ, ಪ್ಲಾಸ್ಟಿಕ್ ಬಳಕೆಯ ದುಷ್ಪರಿಣಾಮಗಳ ಕುರಿತ ವಿಜ್ಞಾನದ ಮಾದರಿಗಳು ಗಮನ ಸೆಳೆಯಿತು.
ನೈಋತ್ಯ ರೈಲ್ವೆಯ ವಿಭಾಗೀಯ ವ್ಯವಸ್ಥಾಪಕ ರಾಹುಲ್ ಅಗರ್ವಾಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಹೊಸ ಅನ್ವೇಷಣೆಗಳನ್ನು ಮಾಡುವ ಹುಮ್ಮಸ್ಸು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಮಿತಿ ಅಧ್ಯಕ್ಷೆ ಪೂಜಾ ಅಗರ್ವಾಲ್ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳ ಸಾಧನೆಯಲ್ಲಿ ಬಹು ಮುಖ್ಯ ಪಾತ್ರ ನಿರ್ವಹಿಸುತ್ತಾರೆ, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಅರಿವು ಮೂಡಿಸಿ ಮೂಢನಂಬಿಕೆಗಳನ್ನು ಹೋಗಲಾಡಿಸುವ ಪ್ರಯತ್ನ ಮಾಡಬೇಕು ಎಂದು ಕರೆ ನೀಡಿದರು.
ಹೆಚ್ಚುವರಿ ವಿಭಾಗೀಯ ವ್ಯವಸ್ಥಾಪಕರಾದ ವಿನಾಯಕ್ ಆರ್. ನಾಯಕ್, ಈ .ವಿಜಯ, ಹಿರಿಯ ವಿಭಾಗ್ಯ ವಾಣಿಜ್ಯ ವ್ಯವಸ್ಥಾಪಕ ಮಂಜುನಾಥ ಕಣ್ಮಾಡಿ ಇದ್ದರು.