ನಗರದ ವಿವಿಧೆಡೆ ಬಾಬೂಜಿ ಸ್ಮರಣೆ

19
Published on

ಮೈಸೂರು: ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಮ್ ಅವರ 37ನೇ ವರ್ಷದ ಪುಣ್ಯಸ್ಮರಣೆ ನಗರದಲ್ಲಿ ಗುರುವಾರ ವಿವಿಧೆಡೆ ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮೈಸೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ರೈಲ್ವೆ ನಿಲ್ದಾಣದ ಬಾಬು ಜಗಜೀವನರಾಮ್ ವೃತ್ತದಲ್ಲಿನ ಅವರ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ಮಾಡಲಾಯಿತು.

ಮೇಯರ್ ಶಿವಕುಮಾರ್, ಉಪ ಮೇಯರ್ ಡಾ.ಜಿ.ರೂಪಾ, ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯತ್ರಿ, ಪಾಲಿಕೆಯ ಆಯುಕ್ತ ಲಕ್ಷ್ಮೀಕಾಂತ್ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ನಗರ ಪೊಲೀಸ್ ಆಯುಕ್ತ ಬಿ.ರಮೇಶ್, ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಡಾ.ಬಾಬು ಜಗಜೀವನರಾಮ್ ಅಧ್ಯಯನ ಕೇಂದ್ರದ ವತಿಯಿಂದ ಡಾ.ಬಾಬು ಜಗಜೀವನರಾಮ್ ಅವರ 37ನೇ ಪುಣ್ಯಸ್ಮರಣೆಯ ಪ್ರಯುಕ್ತ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಕುಲಸಚಿವ ಪ್ರೊ.ಕೆ.ಎಲ್.ಎನ್.ಮೂರ್ತಿ, ಪರಿಕ್ಷಾಂಗ ಕುಲಸಚಿವ ಪ್ರೊ. ಕೆ.ಬಿ.ಪ್ರವೀಣ, ಹಣಕಾಸು ಅಧಿಕಾರಿ ಡಾ.ಎ.ಖಾದರ್ ಪಾಷ, ಅರ್ಥಶಾಸ್ತ್ರ ವಿಭಾಗದ ಡಾ.ಆರ್.ಎಚ್. ಪವಿತ್ರಾ, ಶೈಕ್ಷಣಿಕ ಡೀನ್ ಡಾ.ಎನ್.ಲಕ್ಷ್ಮೀ, ಅಧ್ಯಯನ ಡೀನ್ ಡಾ.ರಮಾನಾಥಂ ನಾಯ್ಡು , ಬಾಬು ಜಗಜೀವನರಾಮ್ ಪೀಠದ ನಿರ್ದೇಶಕಿ ಡಾ.ಆರ್.ಶರಣಮ್ಮ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net