ನಗರದ ಸಾರ್ವಜನಿಕ ವೃತ್ತಕ್ಕೆ ಸ್ವಾತಂತ್ರ ಯೋಧರ ಹೆಸರು - ಸಚಿವ ಗೋವಿಂದ ಕಾರಜೋಳ

01
Published on


ಬೆಳಗಾವಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮದ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ತೆರಳಿ ಅವರನ್ನು ಸನ್ಮಾನಿಸಿ, ಗೌರವಿಸುವುದು ನಮ್ಮ ಪುಣ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಭಾರತ ಬಿಟ್ಟು ತೊಲಗಿ (ಕ್ವಿಟ್​ ಇಂಡಿಯಾ) ಚಳವಳಿಗೆ 80 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಯೋಧರಾದ ಕುವೆಂಪು ನಗರದ ವಿಠ್ಠಲ ಯಾಳಗಿ, ರಾಣಿ ಚನ್ನಮ್ಮ ನಗರದ ರಾಜೇಂದ್ರ ಕಲಟಗಿ ಸನ್ಮಾನಿಸಿದ ಬಳಿಕ ಸಚಿವರು ಮಾತನಾಡಿದರು.

ಅಮೃತ ಮಹೋತ್ಸವದ ಸಂದರ್ಭದಲ್ಲಿ ಸ್ವಾತಂತ್ರ ಯೋಧರನ್ನು ಅವರ ಮನೆಗಳಲ್ಲಿಯೇ ಸನ್ಮಾನಿಸುವ ಮೂಲಕ ಅವರನ್ನು ಗೌರವಿಸಬೇಕು ಎಂಬುದು ಪ್ರಧಾನಮಂತ್ರಿಗಳ ಆಶಯವಾಗಿದೆ. ಅದರಂತೆ ದೇಶಾದ್ಯಂತ ಸ್ವಾತಂತ್ರ್ಯ ಯೋಧರನ್ನು ಗೌರವಿಸಲಾಗುತ್ತಿದೆ. ನಗರದ ಸಾರ್ವಜನಿಕ ವೃತ್ತಕ್ಕೆ ಸ್ವಾತಂತ್ರ್ಯ ಯೋಧರ ಹೆಸರು ಇಡಲು ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾಧಿಕಾರಿ ನಿತೇಶ ಪಾಟೀಲ, ಪೊಲೀಸ್​ ಆಯುಕ್ತ ಡಾ.ಎಂ.ಬಿ.ಬೋರಲಿಂಗಯ್ಯ, ಎಸ್​ಪಿ ಡಾ.ಸಂಜೀವ ಪಾಟೀಲ, ಜಿಪಂ ಸಿಇಒ ದರ್ಶನ್​ ಎಚ್​.ವಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net