ನಗರದಲ್ಲಿ ಅದ್ಧೂರಿಯಾಗಿ ಜರುಗಿದ ಪಾಂಚಜನ್ಯ ಗಣಪತಿ ವಿಸರ್ಜನೆ

ನಗರದಲ್ಲಿ ಅದ್ಧೂರಿಯಾಗಿ ಜರುಗಿದ ಪಾಂಚಜನ್ಯ ಗಣಪತಿ ವಿಸರ್ಜನೆ
Published on

ಹಾಸನ: ಪ್ರತಿವರ್ಷದಂತೆ ಈ ವರ್ಷವೂ ಕೂಡ ಪಾಂಚಜನ್ಯ ಗಣಪತಿ ವಿಸರ್ಜನಾ ಮಹೋತ್ಸವದ ಅಂಗವಾಗಿ ಗುರುವಾರ ಬೃಹತ್ ಶೋಭಯಾತ್ರೆ ನಡೆಯಿತು. ಯಾತ್ರೆಯಲ್ಲಿ ಹಲವು ಕಲಾತಂಡಗಳ ಪಾಲ್ಗೊಂಡು ಆಕರ್ಷಕ ಪ್ರದರ್ಶನ ನೀಡಿ ಎಲ್ಲರ ಕಣ್ಮನ ಸೆಳೆದವು.

ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಸೆ. 19ರಂದು ಮಣ್ಣಿನ ಗಣಪತಿ ಪ್ರತಿಷ್ಠಾಪನೆ ಮಾಡಿ 4 ದಿನಗಳ ಕಾಲ ವಿವಿಧ ಪೂಜಾ ಕೈಂಕರ್ಯಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದ್ದವು. ಕೊನೆಯ ದಿನ ಗುರುವಾರದಂದು ಮಧ್ಯಾಹ್ನದ ವೇಳೆಗೆ ಬೃಹತ್ ಶೋಭಾಯಾತ್ರೆ ಪ್ರಾರಂಭವಾಯಿತು. ಬೇಲೂರು ಕ್ಷೇತ್ರದ ಶಾಸಕ ಎಚ್.ಕೆ. ಸುರೇಶ್ ಅವರು ಪಾಂಚಜನ್ಯ ಗಣೇಶ ವಿಸರ್ಜನಾ ಮಹೋತ್ಸವದಲ್ಲಿ ಪಾಲ್ಗೊಂಡು ಮೆರವಣೆಗೆಯಲ್ಲಿ ಹೆಜ್ಜೆ ಹಾಕಿದರು.

ಶ್ರೀ ಕೃಷ್ಣನ ಬೃಹತ್ ಪ್ರತಿಮೆ, ಗೋವುಗಳು, ಬೂತಪ್ಪನ ವೇಷಧಾರಿಗಳು, ಬ್ಯಾಂಡ್ ಸೆಟ್, ವಾದ್ಯಗೋಷ್ಠಿ ಒಂದು ಕಡೆಯಾದರೆ ಮತ್ತೊಂದು ಕಡೆ ಡಿಜೆ ಸ್ಪೀಕರ್ ಹಾಡುಗಳಿಗೆ ಪುರುಷರು ಮತ್ತು ಮಹಿಳೆಯರು ಹೆಜ್ಜೆ ಹಾಕಿ ಗಮನ ಸೆಳೆದರು. ಮೆರವಣಿಗೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.

ಇದೇ ವೇಳೆ ಪಾಂಚಜನ್ಯ ಗಣಪತಿ ಸೇವಾ ಸಮಿತಿ ಕಾರ್ಯದರ್ಶಿ ರವಿ ಸೋಮು, ಸದಸ್ಯರಾದ ಶರತ್, ವೇಣುಗೋಪಾಲ್, ಕೆಪಿಎಸ್ ಪ್ರಮೋದ್, ಕಿರಣ್, ರಕ್ಷಿತ್ ಭಾರಧ್ವಜ್, ಆರ್‌ಎಸ್‌ಎಸ್ ಪ್ರಮುಖ್ ಮೋಹನ್ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net