ನಗರದಲ್ಲಿ ನಾಳೆ ಪಂಜಿನ ಮೆರವಣಿಗೆ

Shivsharnappa Patil
Published on

ಬೀದರ್: ಹಿಂದೂ ಜಾಗರಣ ವೇದಿಕೆ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಆಗಸ್ಟ್ 14 ರಂದು ನಗರದಲ್ಲಿ ಪಂಜಿನ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಂಜೆ 6ಕ್ಕೆ ಸರಸ್ವತಿ ಶಾಲೆಯಿಂದ ಪಂಜಿನ ಮೆರವಣಿಗೆ ಆರಂಭಗೊಳ್ಳಲಿದೆ. ನಗರದ ಪ್ರಮುಖ ಬೀದಿಗಳ ಮೂಲಕ ಹಾಯ್ದು ಅಂಬೇಡ್ಕರ್ ವೃತ್ತದಲ್ಲಿ ಸಮಾವೇಶಗೊಳ್ಳಲಿದೆ. ಅಲ್ಲಿ ಸಂಜೆ 7ಕ್ಕೆ ಸಾರ್ವಜನಿಕ ಸಭೆ ಜರುಗಲಿದೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಉತ್ತರ ಕರ್ನಾಟಕ ಪ್ರಾಂತ ಶಾರಿರೀಕ ಪ್ರಮುಖ ನಾಗೇಶ ಚಿನ್ನರೆಡ್ಡಿ ಮುಖ್ಯ ಭಾಷಣ ಮಾಡುವರು. ಉದ್ಯಮಿ ದತ್ತಾತ್ರಿ ದಾಚೆಪಲ್ಲಿ ಅಧ್ಯಕ್ಷತೆ ವಹಿಸುವರು. ಹಿಂದೂ ಜಾಗರಣ ವೇದಿಕೆಯ ಪ್ರಾಂತ ಕಾರ್ಯಕಾರಿಣಿ ಸದಸ್ಯ ಶಿವಶರಣಪ್ಪ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡುವರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹಿಂದೂ ಜಾಗರಣ ವೇದಿಕೆಯ ಪ್ರಮುಖರು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net