ನಗರದಲ್ಲಿ ಪೊಲೀಸ್ ಪಥ ಸಂಚಲನ

dvg-police-apr-6-1.jpg
Published on

ದಾವಣಗೆರೆ: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪೂರ್ವವಲಯದ ಐಜಿಪಿ ತ್ಯಾಗರಾಜನ್ ನೇತೃತ್ವದಲ್ಲಿ ನಗರದ ವಿವಿಧೆಡೆ ಗುರುವಾರ ಪೊಲೀಸ್ ಪಥ ಸಂಚಲನ ನಡೆಸಲಾಯಿತು.

ಇಲ್ಲಿನ ಹೈಸ್ಕೂಲ್ ಮೈದಾನದಿಂದ ಆರಂಭವಾದ ಪಥ ಸಂಚಲನದಲ್ಲಿ ಸಾಗಿದ ಅಧಿಕಾರಿ-ಸಿಬ್ಬಂದಿಯತ್ತ ನಾಗರಿಕರು, ಆಟೋ ಚಾಲಕರು ಪುಷ್ಪವೃಷ್ಟಿ ಮೂಲಕ ಸ್ವಾಗತ ಕೋರಿದರು. ಪಿ.ಬಿ.ರಸ್ತೆ, ಜಯದೇವ ವೃತ್ತ, ಶಿವಪ್ಪಯ್ಯ ವೃತ್ತ, ಕೆಟಿಜೆ ನಗರ, ವಿದ್ಯಾರ್ಥಿ ಭವನ, ಚಿಗಟೇರಿ ಆಸ್ಪತ್ರೆ ರಸ್ತೆ, ಹರಳೆಣ್ಣೆ ಕೊಟ್ರಬಸಪ್ಪ ವೃತ್ತ ಮೂಲಕ ಡಿಎಆರ್ ಕವಾಯತು ಮೈದಾನದಲ್ಲಿ ಮುಕ್ತಾಯಗೊಂಡಿತು.

ಎಸ್ಪಿ ಸಿ.ಬಿ.ರಿಷ್ಯಂತ್, ಎಎಸ್ಪಿ ರಾಮಗೊಂಡ ಆರ್. ಬಸರಗಿ, ನಗರ ಉಪ ವಿಭಾಗದ ಡಿವೈಎಸ್ಪಿ ಮಲ್ಲೇಶ್ ದೊಡ್ಮನಿ, ಡಿಎಆರ್ ಡಿವೈಎಸ್ಪಿ ಕೆ.ಕೃಷ್ಣಮೂರ್ತಿ, ಸಿ.ಆರ್.ಪಿ.ಎಫ್ ಅಧಿಕಾರಿಗಳಾದ ಶೈಲಾ ಎಸ್.ಮಹಾರಾಣಾ, ತಾರಾಚಂದ್, ಎಲ್.ಎನ್.ಉಪಾದ್ಯಾಯ್ ಹಾಗೂ ಸಿಬ್ಬಂದಿ, ನಗರ ಉಪ ವಿಭಾಗದ ಪೊಲೀಸ್ ಅಧಿಕಾರಿಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net