ನಗರದಲ್ಲಿ ವಾಹನ ತಪಾಸಣೆ ಕಾರ್ಯಾಚರಣೆ ಚುರುಕು

ನಗರದಲ್ಲಿ ವಾಹನ ತಪಾಸಣೆ ಕಾರ್ಯಾಚರಣೆ ಚುರುಕು
Published on

ಹಾಸನ: ಬುಧವಾರ ರಾತ್ರಿ ಪುಂಡರು ವ್ಹೀಲಿಂಗ್ ಮಾಡಿಕೊಂಡು ಬಂದು ಇಬ್ಬರು ಯುವತಿಯರು ಹೋಗುತ್ತಿದ್ದ ಬೈಕಿಗೆ ಗುದ್ದಿದ ಪರಿಣಾಮ ಯುವತಿಯರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬಳಿಕ ಎಚ್ಚೆತ್ತ ಪೊಲೀಸರು ಗುರುವಾರ ರಾತ್ರಿಯಿಂದ ವಾಹನ ತಪಾಸಣೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ಗುರುವಾರ ರಾತ್ರಿ ಡಿವೈಎಸ್ಪಿ ಉದಯ್ ಭಾಸ್ಕರ್ ಅವರ ನೇತೃತ್ವದಲ್ಲಿ ಎಂಜಿ ರಸ್ತೆ ಸೇರಿದಂತೆ ನಗರದ ಹಲವೆಡೆ ವಾಹನ ತಪಾಸಣೆ ನಡೆಸಲಾಗಿದೆ. ಮದ್ಯಪಾನ ಮಾಡಿ ಬೈಕ್ ಚಾಲನೆ, ಹೆಲ್ಮೆಟ್ ಧರಿಸದೆ ವಾಹನ ಚಾಲನೆ, ಏಕಮುಖ ಸಂಚಾರ ರಸ್ತೆಯಲ್ಲಿ ಅತಿ ವೇಗವಾಗಿ ಬರುವ ಬೈಕ್‌ಗಳ ತಪಾಸಣೆ ನಡೆಸಲಾಯಿತು. ಕಾನೂನು ಉಲ್ಲಂಘಿಸಿದ ಹಲವು ಸವಾರರಿಗೆ ಸ್ಥಳದಲ್ಲಿ ದಂಡ ವಿಧಿಸಲಾಯಿತು. ಕೆಲವು ಬೈಕ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು.

ಶುಕ್ರವಾರ ಕೂಡ ನಗರದ ಎಲ್ಲಾ ಠಾಣಾ ವ್ಯಾಪ್ತಿಗಳಲ್ಲೂ ಈ ಕಾರ್ಯಾಚರಣೆ ಮುಂದುವರಿಸಲಾಯಿತು. ನಗರದ ಪೆನ್ಶನ್ ಮೊಹಲ್ಲಾ ಠಾಣೆಯಲ್ಲಿ 16 ಬೈಕ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಇನ್ನಿತರೆ ಠಾಣೆಗಳಲ್ಲಿ ಕೂಡ ಸ್ಥಳದಲ್ಲಿ ದಂಡ ವಿಧಿಸಿ ವಾಹನ ಸವಾರರಿಗೆ ರಸ್ತೆ ಸಂಚಾರಿ ಅರಿವು ಮೂಡಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net