ನಗರಸಭೆ ಉಪಾಧ್ಯಕ್ಷೆ ಸೇರಿ ನಾಲ್ವರು ಉಚ್ಛಾಟನೆ

CTD A.MURULI--0004
Published on

ಚಿತ್ರದುರ್ಗ: ಚಿತ್ರದುರ್ಗ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಮತ ಚಲಾಯಿಸಿ, ಶಿಸ್ತು ಉಲ್ಲಂಘಿಸಿದ ಬಿಜೆಪಿಯ ನಾಲ್ವರು ನಗರಸಭಾ ಸದಸ್ಯರನ್ನು ಪಕ್ಷದ ಜಿಲ್ಲಾಧ್ಯಕ್ಷ ಎ.ಮುರಳಿ, ಪಕ್ಷದಿಂದ ಉಚ್ಛಾಟಿಸಿದ್ದಾರೆ. ವಿಪ್ ನೀಡಿದ್ದರೂ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಮತ ಚಲಾಯಿಸಿರುವ, ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ, ಸದಸ್ಯರಾದ ನಾಗಮ್ಮ, ಜಯಪ್ಪ, ಮಂಜಣ್ಣ ಅವರನ್ನು ಪಕ್ಷದ ಪ್ರಾಥಮಿಕ ಸ್ಥಾನದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net