ನಗರಸಭೆ ಸದಸ್ಯನಿಂದ ಏಕಾಂಗಿ ಪ್ರತಿಭಟನೆ

08Rajesh7
Published on

ಚಾಮರಾಜನಗರ: ನಗರಸಭೆ ಅವ್ಯವಸ್ಥೆಗಳ ವಿರುದ್ಧ ಜನರು ಪ್ರತಿಭಟನೆ ನಡೆಸುವುದು ಸಾಮಾನ್ಯ. ಆದರೆ ಇಲ್ಲಿ ಜನಪ್ರತಿನಿಧಿ ಪ್ರತಿಭಟನೆ ಮಾಡಿದ್ದಾರೆ.

ನಗರಸಭೆ ಕಚೇರಿ ಮುಂಭಾಗ ಶನಿವಾರ ಮುಂಜಾನೆ ನಗರಸಭೆ ಸದಸ್ಯ, ಎಸ್‌ಡಿಪಿಐ ಪಕ್ಷದ ರಾಜ್ಯ ಸಮಿತಿ ಸದಸ್ಯ ಅಬ್ರಾಹರ್ ಅಹಮದ್ ಕಪ್ಪು ಬಟ್ಟೆ ಪ್ರದರ್ಶನ ಮಾಡಿ, ಏಕಾಂಗಿ ಪ್ರತಿಭಟನೆ ನಡೆಸಿದರು.

ವಾರ್ಡ್‌ನಲ್ಲಿ ಸಮರ್ಪಕವಾಗಿ ಕಸ ವಿಲೇವಾರಿಯಾಗುತ್ತಿಲ್ಲ. ಆರೋಗ್ಯ ನಿರೀಕ್ಷಕ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಬ್ರಾಹರ್ ಅಹಮದ್ ಏಕಾಂಗಿ ಪ್ರತಿಭಟನೆ ನಡೆಸುತ್ತಿರುವ ವಿಷಯ ತಿಳಿದು ಸ್ಥಳಕ್ಕೆ ನಗರಸಭೆ ಸದಸ್ಯರಾದ ಮಹೇಶ್, ಕಲೀಲ್‌ಉಲ್ಲಾ ಮತ್ತು ಸಾರ್ವಜನಿಕರು ಆಗಮಿಸಿ ಬೆಂಬಲ ವ್ಯಕ್ತಪಡಿಸಿದರು. ಸ್ಥಳಕ್ಕೆ ನಗರಸಭೆ ಪೌರಾಯುಕ್ತ, ಆರೋಗ್ಯ ನಿರೀಕ್ಷಕ ಮಂಜು ಆಗಮಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸಿ ಕೊಡುವ ಭರವಸೆ ನೀಡಿದರು. ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಕೈ ಬಿಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net