ನಗರಸಭೆ ಸದಸ್ಯರ ಅನರ್ಹತೆ ಎತ್ತಿಹಿಡಿದ ಹೈಕೋರ್ಟ್

Published on

ಅರಸೀಕೆರೆ: ನಗರಸಭೆ ಆರು ಜೆಡಿಎಸ್ ಬಂಡಾಯ ಸದಸ್ಯರು ಹಾಗೂ ಒಬ್ಬ ಪಕ್ಷೇತರ ಸದಸ್ಯನ ಅನರ್ಹತೆ ಕುರಿತು ಜಿಲ್ಲಾಧಿಕಾರಿ ನೀಡಿದ್ದ ತೀರ್ಪನ್ನು ಹೈಕೋರ್ಟ್ ಗುರುವಾರ ಎತ್ತಿಹಿಡಿದಿದ್ದು ದೂರುದಾರರ ಅರ್ಜಿಯನ್ನು ವಜಾಗೊಳಿಸಿದೆ.

ಹರ್ಷವರ್ಧನ್ ರಾಜ್, ಬಿ.ಎನ್.ವಿದ್ಯಾಧರ್, ದರ್ಶನ್, ಕವಿತಾದೇವಿ ರಾಘವೇಂದ್ರ, ಆಯೇಶಾ ಸಿಕಂದರ್, ಚಂದ್ರಶೇಖರ್ ಹಾಗೂ ಪಕ್ಷೇತರ ಸದಸ್ಯ ಪುಟ್ಟಸ್ವಾಮಿ ಸೇರಿ ಏಳು ಸದಸ್ಯರು ಜೆಡಿಎಸ್ ವಿರುದ್ಧ ಬಂಡೆದ್ದು ರಾಜಿನಾಮೆ ನೀಡಿದ್ದರು. ಪಕ್ಷವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ತಾಲೂಕು ಅಧ್ಯಕ್ಷ ಬಿಳಿಚೌಡಯ್ಯ ದೂರು ನೀಡಿದ್ದರು.

ಇದನ್ನು ಮಾನ್ಯ ಮಾಡಿದ್ದ ಜಿಲ್ಲಾಧಿಕಾರಿ ಆರ್. ಗಿರೀಶ್ ಏಳು ಸದಸ್ಯರ ಸದಸ್ಯತ್ವ ರದ್ದುಗೊಳಿಸಿ ತೀರ್ಪು ನೀಡಿದ್ದರು. ಇದನ್ನು ಪ್ರಶ್ನಿಸಿ ಎಲ್ಲರೂ ಹೈಕೋರ್ಟ್ ಮೊರೆ ಹೋಗಿದ್ದರು. ಸುದೀರ್ಘ ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯ ಗುರುವಾರ ಸದಸ್ಯತ್ವ ರದ್ದುಗೊಳಿಸಿ ತೀರ್ಪುನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net