ನಗರೀಕರಣ ನಾಗಾಲೋಟ ಒಳ್ಳೆಯ ಬೆಳವಣಿಗೆಯಲ್ಲ

29M.D.R.4
Published on

ಮದ್ದೂರು: ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದುದ್ದು. ಬದುಕಿನಲ್ಲಿ ನಮಗೆ ಮಾರ್ಗದರ್ಶನ ಮಾಡಿದ ಶಿಕ್ಷಕರು ಸ್ಮರಣೀಯ. ಅವರನ್ನು ಗೌರವಿಸುವುದು ವಿದ್ಯಾರ್ಥಿಗಳ ಹಾಗೂ ಸಮಾಜದ ಕರ್ತವ್ಯ ಎಂದು ಸಾಹಿತಿ ತೈಲೂರು ವೆಂಕಟಕೃಷ್ಣ ತಿಳಿಸಿದರು.

ಪಟ್ಟಣದ ಟೌನ್ ಕ್ಲಬ್ ಆವರಣದಲ್ಲಿ ಭಾನುವಾರ ಚುಂಚುಶ್ರೀ ಗೆಳೆಯರ ಬಳಗ, ಟೌನ್ ಕ್ಲಬ್ ಹಾಗೂ ಶ್ರೀ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ಬಿ.ಜಿ.ಎಸ್ ಶಿಕ್ಷಕ ಶ್ರೀ ಸೇವಾರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಯುವಕರು, ವಿದ್ಯಾರ್ಥಿಗಳು ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗುತ್ತಿರುವುದು ವಿಷಾದನೀಯ. ದೇಶಿ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯೋನ್ಮುಖರಾಗಬೇಕಿದ್ದು ಪ್ರಸ್ತುತ ದಿನಗಳಲ್ಲಿ ನಗರೀಕರಣ ವ್ಯವಸ್ಥೆ ನಾಗಾಲೋಟದಲ್ಲಿ ಓಡುತ್ತಿದ್ದು ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ ದೇಶ, ಸಮಾಜ, ಅಭಿವೃದ್ಧಿ ಹೊಂದಲು ಶಿಕ್ಷಕರ ಪಾತ್ರ ಅಪಾರ. ಗುರುವಿನ ಮಹತ್ವವನ್ನು ಅರಿತವರು ಜೀವನದಲ್ಲಿ ಏನನ್ನಾದರೂ ಸಾಧನೆ ಮಾಡಲು ಸಾಧ್ಯ. ಆದರ್ಶ, ಶಿಸ್ತು, ತತ್ವಗಳಿಗೆ ಒಳಗಾದ ವಿದ್ಯಾರ್ಥಿಗಳು ಅಕ್ಷರದಾಹವನ್ನು ಜೀವನದುದ್ದಕ್ಕೂ ಮೈಗೂಡಿಸಿಕೊಂಡು ಇಂದಿಗೂ ಆದರ್ಶ ವ್ಯಕ್ತಿಗಳಾಗಿ ಬದುಕುತ್ತಿರುವುದು ಸಂತಸದ ವಿಚಾರ ಎಂದರು.

ಎಚ್.ಕೆ.ವೀರಣ್ಣಗೌಡ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ ಪ್ರೊ.ಬಿ.ಟಿ.ಚಂದ್ರಪ್ಪಗೌಡ ಅವರಿಗೆ ಬಿ.ಜಿ.ಎಸ್ ಶಿಕ್ಷಕ ಶ್ರೀ ಸೇವಾರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಜಾನಪದ ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷ ಡಿ.ಪಿ.ಸ್ವಾಮಿ, ಸರ್ವಶಿವ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಶಿವನಂಜಯ್ಯ, ವರ್ಧಮಾನ ಪ್ಯಾರಾ ಮೆಡಿಕಲ್ ಕಾಲೇಜು ಅಧ್ಯಕ್ಷ ಸಿದ್ದರಾಮು, ಚುಂಚುಶ್ರೀ ಗೆಳೆಯರ ಬಳಗದ ಅಧ್ಯಕ್ಷ ಡಾ.ಬಿ.ಕೃಷ್ಣ, ಗೌರವಾಧ್ಯಕ್ಷ ಚನ್ನಯ್ಯ, ಅಬಕಾರಿ ಇಲಾಖೆ ಉಪ ಅಧೀಕ್ಷಕ ಕೆ.ಟಿ.ವಿಜಯಕುಮಾರ್, ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ಅಧ್ಯಕ್ಷ ಡಿ.ಪಿ.ಶಿವಪ್ಪ, ಸಂಸ್ಥೆಯ ಪದಾಧಿಕಾರಿಗಳಾದ ವಿ.ಟಿ.ರವಿಕುಮಾರ್, ದೊರೆಸ್ವಾಮಿ, ಎಂ.ಎ.ಕೃಷ್ಣ, ಕೆ.ಶಿವಕುಮಾರ್, ಎಸ್.ಚಂದ್ರು, ಸಂಚಾಲಕರಾದ ಕೆ.ನಾರಾಯಣ್, ಎಚ್.ಕೆ.ಆನಂದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net