ನಟ ಶಿವಣ್ಣ ಗುಣಮುಖರಾಗಲೆಂದು ವಿಶೇಷ ಪೂಜೆ

26rajesh2
Published on

ಚಾಮರಾಜನಗರ: ನಟ ಶಿವರಾಜ್ ಕುಮಾರ್ ಅವರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಬೇಗ ಗುಣಮುಖರಾಗಲಿ ಎಂದು ಡಾ.ಎಸ್.ಪಿ ಬಾಲಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾವೇದಿಕೆಯಿಂದ ಇಡುಗಾಯಿ ಒಡೆಯುವ ಮೂಲಕ ಗುರುವಾರವಿಶೇಷ ಪೂಜೆ ಸಲ್ಲಿಸಲಾಯಿತು.

ನಗರದ ದೊಡ್ಡರಸನ ಕೊಳದ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆಸಲ್ಲಿಸಿದ ಬಳಿಕ, ಸಿಂಹ ಥಿಯೇಟರ್‌ನ ಮಾಲೀಕ ಜಯಸಿಂಹ ಮಾತನಾಡಿ, ಮೂತ್ರಕೋಶ ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಶಿವರಾಜ್ ಕುಮಾರ್ ಅವರಿಗೆ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಅಮೆರಿಕದ ಡಾ.ಮುರುಗೇಶ ಮನೋಹರನ್ ಅವರು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಅವರು ಆದಷ್ಟು ಬೇಗ ಗುಣಮುಖರಾಗಿ, ಸಿನಿಮಾಗಳಲ್ಲಿ ತೊಡಗಿಸಿಕೊಳ್ಳಲಿ ಎಂದು ಹೇಳಿದರು.

ಈ ವೇಳೆ ಡಾ.ಎಸ್.ಪಿ ಬಾಲಸುಬ್ರಹ್ಮಣ್ಯಂ ಗಾನ ಗಂಧರ್ವ ಸಾಂಸ್ಕೃತಿಕ ಕಲಾ ವೇದಿಕೆಯ ಅಧ್ಯಕ್ಷ ಎಚ್.ಎಂ.ಶಿವಣ್ಣ, ಪ್ರಧಾನ ಕಾರ್ಯದರ್ಶಿ ಡಿ.ರಾಜಣ್ಣ, ಈಶ್ವರಿ ಟಸ್ಟ್‌ನ ವೆಂಕಟೇಶ್, ವಿ.ಶ್ರೀನಿವಾಸ್, ರಕ್ಷಣಾ ವೇದಿಕೆಯ ಗೌರವಾಧ್ಯಕ್ಷ ಕೃಷ್ಣನಾಯಕ, ಎಲ್.ಸುರೇಶ್, ರವಿಚಂದ್ರ ಪ್ರಸಾದ್ ಕಹಳೆ, ಕಲಾವಿದರಾದ ಗೌರಿಶಂಕರ್, ಕೆ.ಸಿ.ರಂಗಸ್ವಾಮಿ, ವಸಂತ ಬಂಗಾರು, ಮಣಿ ಹಾಗೂ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net