

ಮುಂಡಗೋಡ: ತಾಲೂಕಿನ ಇಂದೂರ ಗ್ರಾಮದ ಜಾನಪದ ಕಲಾವಿದ ಸಹದೇವಪ್ಪ ನಡಿಗೇರ ಅವರು 2019-20ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿಯ ಲಾವಣಿಪದ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಜಾನಪದ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಪ್ರತಿ ಜಿಲ್ಲೆಯ ಒಬ್ಬ ಕಲಾವಿದನಿಗೆ ಕರ್ನಾಟಕ ಜಾನಪದ ಅಕಾಡೆಮಿಯು ಪ್ರತಿ ವರ್ಷ ನೀಡುವ ಪ್ರಶಸ್ತಿ ಇದಾಗಿದೆ.
ಇವರಿಗೆ ಕಾಯಕ ಯೋಗಿ ಪ್ರಶಸ್ತಿ, ಕಲಾ ಸೇವಾ ಪ್ರಶಸ್ತಿ ಹಾಗೂ ಇನ್ನಿತರ ಪ್ರಶಸ್ತಿಗಳು ಲಭಿಸಿವೆ. ಅಲ್ಲದೆ, ಇವರು ಮುಂಡಗೋಡ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್, ಜಾನಪದ ಪರಿಷತ್, ಸಾಹಿತ್ಯ ಪರಿಷತ್ ಹಾಗೂ ಕಸ್ತೂರಿ ಸಿರಿಗನ್ನಡ ವೇದಿಕೆಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದರು. ಈ ಎಲ್ಲ ಸೇವೆಗಳನ್ನು ಪರಿಗಣಿಸಿ ಜಿಲ್ಲೆಯಿಂದ ಜಾನಪದ ಕಲಾವಿದ ಸಹದೇವಪ್ಪ ನಡಿಗೇರ ಅವರಿಗೆ ಪ್ರಶಸ್ತಿ ನೀಡಲಾಗಿದ್ದು, ಇದರಿಂದ ತಾಲೂಕಿನ ಕೀರ್ತಿ ಹೆಚ್ಚಾಗಿದೆ.
*