

ನಂಜನಗೂಡು: ನಂಜನಗೂಡು ತಾಲೂಕು ಚುಂಚನಹಳ್ಳಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರ ಗುಂಪುಗಳ ನಡುವೆ ನಡು ರಸ್ತೆಯಲ್ಲಿಯೇ ಮಂಗಳವಾರ ಹೊಡೆದಾಟ ನಡೆದಿದೆ.
ಕವಲಂದೆ ಪೊಲೀಸ್ ಠಾಣೆ ವ್ಯಾಪ್ತಿಯ ಚುಂಚನಹಳ್ಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು ಜಾತ್ರೆಗೆ ಯುವಕರು ಗುಂಪು ಆಗಮಿಸಿತ್ತು ಎನ್ನಲಾಗಿದೆ. ಬೈಕ್ ಸೈಡ್ ಹಾಕಿದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಇಬ್ಬರು ಯುವಕರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಮೈಸೂರು ಮೂಲದ ಯುವಕ ದರ್ಶನ್ ಎಂಬಾತನಿಗೆ ಗಂಭೀರ ಗಾಯವಾಗಿದೆ. ಗಲಾಟೆಯ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದೆ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ.