

ಕೊಡಗು: ಇಲ್ಲಿಗೆ ಸಮೀಪದ ಎಮ್ಮೆಮಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡಿಯಾಣಿ ಗ್ರಾಮದ ಬೈರಂಡಾಣೆ ನಿವಾಸಿ ಬಿ.ಯು. ಶಾದುಲಿ (55) ಅವರ ದೇಹ ಬೈರಂಡಾಣೆ ಮಸೀದಿಯ ಕೋಣೆಯಲ್ಲಿ ಶುಕ್ರವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕೂಲಿ ಕೆಲಸ ಮಾಡಿಕೊಂಡಿದ್ದ ಶಾದುಲಿ ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು, ಶುಕ್ರವಾರ ಬೆಳಗ್ಗೆ ಮನೆಯಿಂದ ಹೊರಗಡೆ ತೆರಳಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ನಾಪೋಕ್ಲು ಪೊಲೀಸರು ಭೇಟಿ ನೀಡಿ, ಮಹಜರು ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.