ನೇಣು ಬಿಗಿದುಕೊಂಡು ಬಾಲಕಿ ಆತ್ಮಹತ್ಯೆ

Nishma
ನಿಷ್ಮಾ
Published on

ರಿಪ್ಪನ್‌ಪೇಟೆ: ಸಮೀಪದ ನೇರಲಮನೆ ಗ್ರಾಮದಲ್ಲಿ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಂಗಳವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಒಂಬತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ ನಿಷ್ಮಾ (15) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮಂಗಳವಾರ ಶಾಲೆಗೆ ತೆರಳದೆ ವಿದ್ಯಾರ್ಥಿನಿ ಮನೆಯಲ್ಲಿಯೇ ಇದ್ದಳು. ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net