ನದಿ ತೀರದ ಗ್ರಾಮಸ್ಥರಿಗೆ ಪ್ರವಾಹ ಭೀತಿ

ydg5
ನಾರಾಯಣಪುರದ ಬಸವಸಾಗರ ಜಲಾಶಯದ ಮುಖ್ಯಗೇಟ್‌ಗಳಿಂದ ನದಿಗೆ 1.80 ಲಕ್ಷ ಕ್ಯೂಸೆಕ್ ನೀರು ಹರಿಬಿಟ್ಟಿರುವುದು.
Published on

ಕೊಡೇಕಲ್: ಮಹಾರಾಷ್ಟçದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಒಳಹರಿವಿನಲ್ಲಿ ಹೆಚ್ಚಳವಾಗಿದ್ದು, ಅಲ್ಲದೆ ವಲಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ರೈತರಿಗೆ ಚಿಂತೆಗೀಡಾದರೆ ನದಿ ತೀರದ ಗ್ರಾಮಗಳಿಗೆ ಮತ್ತೆ ಪ್ರವಾಹ ಭೀತಿ ಎದುರಾಗಿದೆ.

ಮಂಗಳವಾರ ಸಂಜೆಯಿAದ ಕೃಷ್ಣೆಗೆ 1.80 ಲಕ್ಷ ಕ್ಯೂಸೆಕ್ ಪ್ರಮಾಣದ ನೀರು ನದಿಗೆ ಹರಿಸುತ್ತಿರುವ ಕಾರಣ ನಾರಾಯಣಪುರ ಬಸವಸಾಗರ ಜಲಾಶಯದ ಒಳಹರಿವಿನಲ್ಲಿ ಮತ್ತೆ ದಿಢೀರ್‌ನೆ ಏರಿಕೆಯಾಗಿದೆ ಹೀಗಾಗಿ ತನ್ನ ನೀರಿನ ಸಂಗ್ರಹ ಮಟ್ಟ ಕಾಯ್ದುಕೊಂಡು 30 ಮುಖ್ಯಗೇಟ್‌ಗಳ ಮೂಲಕ ಕೃಷ್ಣೆಗೆ 1.80 ಲಕ್ಷ ಕ್ಯೂಸೆಕ್ ಪ್ರಮಾಣದ ನೀರು ಹರಿಸಲಾಗುತ್ತಿದೆ.

ವಲಯದಲ್ಲಿ 15 ದಿನದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಅಲ್ಲದೆ ತಗ್ಗು ಪ್ರದೇಶದ ಭೂಮಿಯಲ್ಲಿ ಬಿತ್ತನೆ ಮಾಡಿದ ಹತ್ತಿ ಮತ್ತು ತೊಗರಿ ಸೇರಿದಂತೆ ಇತರೆ ಬೆಳೆಗಳು ತೇವಾಂಶ ಹೆಚ್ಚಳದಿಂದ ಒಣಗಲಾರಂಭಿಸಿದ್ದರಿAದ ರೈತರು ಆತಂಕ ಪಡುವಂತಾಗಿದೆ.

ಮತ್ತೆ ಜಲಾಶಯಕ್ಕೆ ಒಳಹರಿವು ಹೆಚ್ಚಾಗುತ್ತಿರುವ ಕಾರಣ ಕೃಷ್ಣಾ ನದಿಗೆ ಮತ್ತೆ ಪ್ರವಾಹ ಭೀತಿ ಎದುರಾಗಿದ್ದು, ಯಾವುದೆ ಕಾರಣಕ್ಕೂ ನದಿ ತೀರಕ್ಕೆ ಜನರು ತೆರಳಬಾರದು, ಮುಖ್ಯವಾಗಿ ಕುರಿಗಾಹಿಗಳು ಹಾಗೂ ಮೀನುಗಾರರು ಜಾಗೃತರಾಗಿರಬೇಕು ಎಂದು ಹುಣಸಗಿ ತಹಸೀಲ್ದಾರ್ ಬಸಲಿಂಗಪ್ಪ ನೈಕೋಡಿ ಮಾಹಿತಿ ನೀಡಿದ್ದಾರೆ. ತಡರಾತ್ರಿವರೆಗೆ 2 ಲಕ್ಷ ಕ್ಯೂಸೆಕ್ ನೀರು ಹರಿಸುವ ಸಾಧ್ಯತೆ ಇದೆ ಎಂದು ಜಲಾಶಯ ಮೂಲ ತಿಳಿಸಿದ್ದು, ಮತ್ತೆ ಛಾಯಾ ಭಗವತಿ ದೇವಸ್ಥಾನಕ್ಕೆ ಜಲದಿಗ್ಬಂಧನವಾಗುವ ಸಾಧ್ಯತೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net