ನದಿ ತೀರದ ಪ್ರದೇಶಗಳಿಗೆ ಮಾಜಿ ಸಚಿವ ಭೇಟಿ

ಚಿತ್ರ 1ಎಸ್ ಡಿ ಪಿ 01
ಸಿದ್ದಾಪುರ ಕಾಳಜಿ ಕೇಂದ್ರಕ್ಕೆ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣಗೌಡ ಗುರುವಾರ ಭೇಟಿ ನೀಡಿದ್ದರು.
Published on

ಸಿದ್ದಾಪುರ: ಸಿದ್ದಾಪುರಕ್ಕೆ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣಗೌಡ ಗುರುವಾರ ಭೇಟಿ ನೀಡಿ, ಕಾವೇರಿ ನದಿ ದಡ ಗ್ರಾಮಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಬಳಿಕ ಸಿದ್ದಾಪುರ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದ ವೇಳೆ ಈ ಭಾಗದ ಸಂತ್ರಸ್ತರು ಶಾಶ್ವತ ಪುನರ್ವಸತಿಗೆ ಮನವಿ ಮಾಡಿದ್ದಾರೆ.

ಬಳಿಕ ಮಾತನಾಡಿದ ಅಶ್ವತ್ಥನಾರಾಯಣ, ಬಿಜೆಪಿ ಸರ್ಕಾರ ಇದ್ದಾಗ ತಕ್ಷಣ ಪರಿಹಾರ ನೀಡಲಾಗುತ್ತಿತ್ತು. ಕಾಂಗ್ರೆಸ್ ಸರ್ಕಾರ ಪರಿಹಾರ ವಿತರಣೆಗೆ ವಿಳಂಬ ಮಾಡುವುದು ಸರಿಯಲ್ಲ. ಕೂಡಲೇ ಸಂತ್ರಸ್ತರ ಬೇಡಿಕೆಯನ್ನು ಈಡೇರಿಸಿ ಶಾಶ್ವತ ಪುನರ್ವವಸತಿ ಕಲ್ಪಿಸಲಿ ಎಂದು ಆಗ್ರಹಿಸಿದರು.
ಈ ಹಿಂದೆ ಶಾಶ್ವತ ಪರಿಹಾರದ ಚಿಂತನೆ ಮಾಡಿ ಜಾಗ ಗುರುತಿಸಲಾಗಿತ್ತು. ಸಂತ್ರಸ್ತರು ಸ್ಥಳದಿಂದ ತೆರಳಲು ಮುಂದಾಗಿರಲಿಲ್ಲ. ಈಗ ಸಂತ್ರಸ್ತರು ಪುನರ್ವಸತಿ ಸ್ಥಳಗಳಿಗೆ ತೆರಳಲು ಒಪ್ಪಿದ್ದಾರೆ. ಸರ್ಕಾರ ಆದಷ್ಟು ಬೇಗ ಶಾಶ್ವತ ವ್ಯವಸ್ಥೆಯನ್ನು ಮಾಡಬೇಕು. ಬಿಜೆಪಿ ವಿರೋಧ ಪಕ್ಷವಾಗಿ ಸಂತ್ರಸ್ತರ ಪರವಾಗಿ ಒತ್ತಾಯ ಮಾಡುತ್ತೇವೆ ಎಂದರು.

ಎಂಎಲ್‌ಸಿ ಸುಜಾ ಕುಶಾಲಪ್ಪ, ಮಾಜಿ ಶಾಸಕ ಕೆ.ಜಿ.ಬೋಪಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ ಸೇರಿದಂತೆ ಪ್ರಮುಖರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net