ನದಿ ಪಾತ್ರದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಸಲಹೆ

Published on

ಬೈಲುಕುಪ್ಪೆ: ಕಾವೇರಿ ನದಿ ಪಾತ್ರದಲ್ಲಿ ಮಳೆ ಹೆಚ್ಚಾಗಿದ್ದು, ಜಿಲ್ಲಾಧಿಕಾರಿ ಆದೇಶದ ಮೇರೆಗೆ ಹಾರಂಗಿ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಹೊರಬಿಡುವುದರಿಂದ ಕೊಪ್ಪ ನದಿ ಸಮೀಪ ವಾಸಿಸುತ್ತಿರುವ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮ ವಹಿಸಬೇಕೆಂದು ಕೊಪ್ಪ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸತೀಶ್ ಮನವಿ ಮಾಡಿದ್ದಾರೆ.

ಪಿರಿಯಾಪಟ್ಟಣ ತಾಲೂಕು ಕೊಪ್ಪ ಸಮೀಪವಿರುವ ಕಾವೇರಿ ನದಿಯ ಪಾತ್ರದಲ್ಲಿ ಮಳೆಯೂ ಹೆಚ್ಚಾಗಿದ್ದು ಹಾರಂಗಿ ಜಲಾಯನ ಪ್ರದೇಶಗಳಲ್ಲಿ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜಲಾಯನ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದು,್ದ ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಂಭವವಿದೆ. ಜಲಾಶಯ ಗರಿಷ್ಠ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುವುದು. ಆದ್ದರಿಂದ ಹಾರಂಗಿ ಮತ್ತು ಕಾವೇರಿ ನದಿಯ ಸಮೀಪದಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ, ಜನ-ಜಾನುವಾರುಗಳ ರಕ್ಷಣೆ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಮತ್ತು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net