ನದಿ, ಪ್ರಕೃತಿ ಸಂರಕ್ಷಣೆ ಮಾಡೋಣ

10Kush01
Published on

ಕುಶಾಲನಗರ:\ ನದಿ, ಪ್ರಕೃತಿ ಆರಾಧನೆ ಮೂಲಕ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ ಮಾಡಬೇಕಿದೆ ಎಂದು ಕುಶಾಲನಗರ ಗಣಪತಿ ದೇವಾಲಯದ ಪ್ರಧಾನ ಅರ್ಚಕ ಆರ್.ಕೆ.ನಾಗೇಂದ್ರ ಬಾಬು ತಿಳಿಸಿದರು.


ಕುಶಾಲನಗರ ಕಾವೇರಿ ಮಹಾ ಆರತಿ ಬಳಗ, ಅರ್ಚಕರ ಸಂಘದ ಸಹಯೋಗದೊಂದಿಗೆ ಗುರುವಾರ ಆಯೋಜಿಸಿದ್ದ 142ನೇ ಕಾವೇರಿ ಮಹಾ ಆರತಿ ಕಾರ್ಯಕ್ರಮದಲ್ಲಿ ಮಾತನಾಡಿ, ಜಲಮೂಲಗಳನ್ನು ಕಲುಷಿತಗೊಳಿಸಬಾರದು. ಪ್ರತಿಯೊಬ್ಬರೂ ನದಿಯ ಸ್ವಚ್ಛತೆ ವಿಷಯದಲ್ಲಿ ನಿತ್ಯ ಜಾಗೃತರಾಗಬೇಕಾಗಿದೆ ಎಂದರು.
ಶಿವಮೊಗ್ಗದ ನಾಟಿ ವೈದ್ಯೆ ಸುಮನ ಮಳಲಗದ್ದೆ ಮಾತನಾಡಿ, ದೈವಿ ಸ್ವರೂಪದ ನದಿ ತೊರೆಗಳನ್ನು ತಾಯಿಯಂತೆ ನೋಡಿಕೊಂಡಲ್ಲಿ ಅದು ನಮ್ಮನ್ನು ಕಾಪಾಡುತ್ತದೆ ಎಂದರು.


ಅರ್ಚಕ ಕೃಷ್ಣಮೂರ್ತಿ ಭಟ್ ಧಾರ್ಮಿಕ ವಿಧಾನಗಳನ್ನು ನೆರವೇರಿಸಿದರು. ಕೊಡಗು ಜಿಲ್ಲಾ ಅರ್ಚಕರ ಮತ್ತು ಪುರೋಹಿತರ ಸಂಘದ ಅಧ್ಯಕ್ಷ ರಾಘವೇಂದ್ರ ಭಟ್, ಕುಶಲ ಅರ್ಚಕರ ಸಂಘದ ಅಧ್ಯಕ್ಷ ಪರಮೇಶ್ವರ ಭಟ್, ಸೋಮಶೇಖರ ಭಟ್, ಆದಿತ್ಯ ಭಟ್, ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ನಿವೃತ್ತ ಅಧಿಕಾರಿ ಕೆಂಚಪ್ಪ, ಗ್ರಾಮೀಣಾಭಿವೃದ್ಧಿ ಸಂಘದ ವಲಯ ಮೇಲ್ವಿಚಾರಕಿ ಪೂರ್ಣಿಮಾ, ಸೇವಾ ಪ್ರತಿನಿಧಿಗಳು ಮತ್ತು ಬಳಗದ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net