ನದಿಗೆ ಉರುಳಿದ ಸಿಲಿಂಡರ್ ಲಾರಿ

WhatsApp Image 2024-02-07 at 07.06.42
Published on


ಯಾದಗಿರಿ: ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ದೋಣಿ ನದಿಗೆ ಬಿದ್ದ ಘಟನೆ ಬುಧವಾರ ಬೆಳಗಿನ ಜಾವ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ಸಮೀಪ ನಡೆದಿದೆ.
ಕೊಡೇಕಲ್ ಸೇರಿ ಇನ್ನಿತರ ಕಡೆಗಳಲ್ಲಿ ಗ್ಯಾಸ್ ವಿತರಕರಿಗೆ ಸಿಲಿಂಡರ್ ಸಾಗಿಸುತ್ತಿದ್ದ ವಾಹನ ಚಾಲಕ ನಿಯಂತ್ರಣ ತಪ್ಪಿ ಡೋಣಿ ನದಿಗೆ ಉರುಳಿದ್ದು ಯಾವುದೇ ರೀತಿಯ ಪ್ರಾಣ ಹಾನಿಯಾಗಿಲ್ಲ. ವಾಹನದಲ್ಲಿದ್ದ ಗ್ಯಾಸ್ ಸಿಲಿಂಡರ್ ಗಳು ಡೋಣಿ ನದಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ ಸ್ಥಳಕ್ಕೆ ಪೊಲಿಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.

ಚಾಲಕ ನಿದ್ದೆ ಮಂಪರಿನಲ್ಲಿರುವುದೇ ಘಟನೆಗೆ ಕಾರಣ ಎಂದು ಬಲ್ಲ ಮೂಲಗಳು ತಿಳಿಸಿವೆ. ಕೊಡೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net