ನದಿಯಲ್ಲಿ ಮುಳುಗಿ ಬಾಲಕ ಸಾವು

17krp 01
Published on

ಕೆ.ಆರ್.ಪೇಟೆ: ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿ ಕಟ್ಟೆಕ್ಯಾತನಹಳ್ಳಿ ಗ್ರಾಮದ ಬಾಲಕ ಸೋಮವಾರ ಸಂಜೆ ಹೇಮಾವತಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.
ಗ್ರಾಮದ ಬೋರೇಗೌಡ ಎಂಬುವರ ಪುತ್ರ ಪೃಥ್ವಿ(14) ಮೃತ ಬಾಲಕ. ಈತ ತನ್ನ ಮೂವರು ಸ್ನೇಹಿತರೊಂದಿಗೆ ಕಟ್ಟೆಕ್ಯಾತನಹಳ್ಳಿ ಬಳಿ ಹೇಮಾವತಿ ನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಪೃಥ್ವಿ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದಾನೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮಂಗಳವಾರ ಬೆಳಗ್ಗೆ ಮೃತದೇಹ ಪತ್ತೆಹಚ್ಚಿ ವಾರಸುದಾರರಿಗೆ ಒಪ್ಪಿಸಿದರು.
ಠಾಣಾಧಿಕಾರಿ ಶಿವಣ್ಣ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಂತೋಷ್‌ಕುಮಾರ್, ಸಚ್ಚಿನ್, ಓಂಕಾರ್ ಪಾಟೀಲ್, ಭಜಂತ್ರಿ ಕಿರಣ್‌ಕುಮಾರ್ ಭಾಗವಹಿಸಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net