ನನಗೆ ಜೀವ ಬೆದರಿಕೆ ಹಾಕಿದ್ದಾರೆ

bkt-28-1
ಪ್ರವೀಣಗೌಡ ಪಾಟೀಲ
Published on

ಬಾಗಲಕೋಟೆ: ಬೀಳಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನಮಂತ ಕಾಖಂಡಕಿ ಅವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಕೆಪಿಸಿಸಿ ಸಂಯೋಜಕ, ರಾಜ್ಯ ಯುವ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಪ್ರವೀಣಗೌಡ ಪಾಟೀಲ ಆರೋಪಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮತನಾಡಿದ ಅವರು, ಗುರುವಾರ ರಾತ್ರಿ ೧೦ ಗಂಟೆಗೆ ನನಗೆ ಕಾಖಂಡಕಿ ಅವರು ಕರೆ ಮಾಡಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಬೀಳಗಿಯಲ್ಲಿ ನನಗೆ ಹೇಳದೆ ಪಕ್ಷದ ಯುವಕರನ್ನು ಸಂಘಟನೆ ಮಾಡುತ್ತಿದ್ದೀಯಾ ಅದನ್ನು ಬೀಡಬೇಕು. ಇಲ್ಲದಿದ್ದರೆ ನಿನ್ನ ಜೀವ ತೆಗೆಯುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆ ಎಂದರು.

ಇಷ್ಟೇ ಅಲ್ಲದೇ ಅವರ ಮಗನಿಂದ ಜಾತಿ ನಿಂದನೆ ಪ್ರಕರಣ ದಾಖಲಿಸುವುದಾಗಿ ಜಿಪಂ ಮಾಜಿ ಸದಸ್ಯ ಹಾಗೂ ಈಗ ಬೀಳಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನಮಂತ ಕಾಖಂಡಕಿ ಅವರು ಬೆದರಿಕೆ ಹಾಕುತ್ತಿದ್ದಾರೆ. ಪಕ್ಷಕ್ಕೆ ಹಾಗೂ ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ತರುತ್ತಿದ್ದಾರೆ ಎಂದು ದೂರಿದರು.

ಕಾಖಂಡಕಿ ಅವರು ಹಲವಾರು ಅಮಾಯಕರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಈಗಾಗಲೇ ಎಲ್ಲ ಘಟನೆಗಳ ಬಗ್ಗೆ ಶಾಸಕ ಜೆ.ಟಿ.ಪಾಟೀಲ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಅವರ ಗಮನಕ್ಕೆ ತಂದಿದ್ದು, ಅಲ್ಲದೇ ರಾಜ್ಯ ನಾಯಕರಿಗೂ ತಿಳಿಸಿದ್ದೇನೆ. ಕೂಡಲೇ ಕಾಖಂಡಕಿ ಅವರ ವಿರುದ್ಧ ಪಕ್ಷ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಘಟನೆಯ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿಗಳಿಗೆ ದೂರನ್ನು ನೀಡುತ್ತೇನೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net