

ನನಗೆ ಭಾಷೆ, ಧರ್ಮದ ರಾಜಕಾರಣದಲ್ಲಿ ವಿಶ್ವಾಸವಿಲ್ಲ
ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅಭಿಮತ
ವಿಜಯವಾಣಿ ಸುದ್ದಿಜಾಲ ಬೆಳಗಾವಿ
ನನಗೆ ಯಾವುದೇ ಭಾಷೆ, ಧರ್ಮದ ರಾಜಕಾರಣದಲ್ಲಿ ವಿಶ್ವಾಸವಿಲ್ಲ. ಕೇವಲ ಅಭಿವೃದ್ಧಿಯಲ್ಲಿ ನಂಬಿಕೆ ಇಟ್ಟವಳು ನಾನು ಎಂದು ಸಚಿವ ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.
ಗ್ರಾಮೀಣ ಕ್ಷೇತ್ರದ ಬಾಳೇಕುಂದ್ರಿ ಕೆ.ಎಚ್ ಗ್ರಾಮದಲ್ಲಿ ನೂತನ ನಿರ್ಮಿಸಿರು ಧರ್ಮವೀರ ಛತ್ರಪತಿ ಸಂಭಾಜಿ ಮಹಾರಾಜರ ಮೂ ರ್ತಿಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಕ್ಷೇತ್ರದ ಜನರ ಆಶಿರ್ವಾದದಿಂದ ಭೀಕರ ಅಪಘಾತ ನಡೆದರೂ ನಾನು ಬದುಕಿ ಬಂದಿದ್ದೇನೆ. ಅಪಘಾತದಿಂದ ಗಾಯಗೊಂಡು 40 ದಿನ ಹಾಸಿಗೆ ಹಿಡಿದಿದ್ದರೂ ಕ್ಷೇತ್ರದ ಕೆಲಸ ನಿಂತಿಲ್ಲ ಧರ್ಮದಲ್ಲಿ ರಾಜಕಾರಣ ಇರಬಾರದು. ರಾಜಕಾರಣದಲ್ಲಿ ಧರ್ಮ ಇರಬೇಕು, 'ಧರ್ಮದಿಂದ ರಾಜಕಾರಣ ಮಾಡಬೇಕು.
ಪುಣ್ಯ ಪುರುಷರ ಇತಿಹಾಸವನ್ನು ಮುಂದಿನ ಪೀಳಿಗೆಗೆ ತಿಳಿಸಬೇಕೆನ್ನುವ ಉದ್ದೇಶದಿಂದ ಸಂಭಾಜಿ ಮಹಾರಾಜರ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಹಾಗಾಗಿ ಮಹಾನ್ ಪುರುಷರ ಮೂರ್ತಿ ಪ್ರತಿಷ್ಠಾಪಿಸಲು ಯಾರಾದರೂ ಸಹಾಯ ಕೇಳಿದರೆ ಸಹಾಯ ಮಾಡಲು ನಮಗೆ ಹೆಮ್ಮೆ ಎನಿಸುತ್ತದೆ. ಈ ಭಾಗದ ವಿವಿಧ ಗ್ರಾಮಗಳಲ್ಲಿ ಒಂದು ಕೋಟಿ ರೂ.ವೆಚ್ಚದಲ್ಲಿ ಬಸವಣ್ಣನ ಮಂದಿರ, 2 ಕೋಟಿ ರೂ. ವೆಚ್ಚದಲ್ಲಿ ಕಲ್ಯಾಣ ಮಂಟಪ ಸೇರಿದಂತೆ ಹಲವು ಅಭಿವಧಿ ಕಾಮಗಾರಿಗಳನ್ನು ಹಮ್ಮಿಕೊಳಲಾಗಿದೆ ಎಂದು ತಿಳಿಸಿದರು.
ವಿ.ಪ ಸದಸ್ಯ ಚನ್ನರಾಜ ಹಟ್ಟಿಹೊಳಿ ಇತರರಿದ್ದರು.