ನನಗೆ ಲೋಕಸಭೆಗೆ ಆಸಕ್ತಿ ಇಲ್ಲ

15 vikram 2
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಲೋಕಸಭೆ ಚುನಾವಣೆಯಲ್ಲಿ ನಾನು ಆಕಾಂಕ್ಷಿಯಲ್ಲ. ಲೋಕಸಭೆ ಚುನಾವಣೆ ನನಗೆ ಆಸಕ್ತಿ ಇಲ್ಲ. ಆದರೆ ಹೈಕಮಾಂಡ ಹೇಳಿದರೆ ಮಾಡಬೇಕಾಗುತ್ತದೆ. ಲೋಕಸಭೆ ಚುನಾವಣೆ ಗೆಲ್ಲಿಸಲು ನಮ್ಮೆಲ್ಲರ ಮೇಲೆ ಒತ್ತಡ ಇದೆ. ಹೀಗಾಗಿ ಎಲ್ಲರೂ ಸೇರಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದ ಕಾರ್ಯಕ್ರಮಗಳು ಮನೆ ಮನೆ ಮುಟ್ಟುತ್ತಿವೆ. ಅದರ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. 10 ವರ್ಷದಿಂದ ಪ್ರಧಾನಿ ನರೇಂದ್ರ ಮೋದಿ ಮಾತುಗಳನ್ನು ಜನರು ಕೇಳಿದ್ದಾರೆ. ಕೇಂದ್ರ ಸರ್ಕಾರ ಎಲ್ಲ ರೀತಿಯಲ್ಲಿ ವಿಫಲವಾಗಿದೆ ಎಂದರು.
ಪ್ರಧಾನಮಂತ್ರಿ ಮಾಧ್ಯಮಗಳ ಮೂಲಕ ಕೇವಲ ಪ್ರಚಾರ ಗಿಟ್ಟಿಸಿಕೊಂಡಿದ್ದಾರೆ. 2014ರ ವರೆಗೆ ಎಲ್ಲ ಪಕ್ಷದವರು ಆಡಳಿತ ಮಾಡಿದ್ದರು. ಈ ಅವಧಿಗೆ ದೇಶದ ಸಾಲ 55 ಲಕ್ಷ ಕೋಟಿ ಸಾಲ ಇತ್ತು. ಈಗ ಅದು 175 ಲಕ್ಷ ಕೋಟಿಗೆ ಮುಟ್ಟಿದೆ. ಇದಕ್ಕೆ ಅವರು ಉತ್ತರ ಕೊಡುವುದಿಲ್ಲ. ಒಂದೇ ಒಂದು ಸುದ್ದಿಗೋಷ್ಠಿ ಮಾಡಿಲ್ಲ. ಗಟ್ಟಿಯಾದ ಪ್ರಧಾನಿ ಎಂದು ಹೇಳುತ್ತಾರೆ. ಆದರೆ ಮಾಧ್ಯಮಗಳ ಮುಂದೆ ಬರುತ್ತಿಲ್ಲ. ಇದು ಕೇವಲ ತೋರಿಕೆಯ ಸರ್ಕಾರ ಆಗಿದೆ ಎಂದು ವ್ಯಂಗ್ಯವಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net