ನನ್ನ ಶ್ರಮಕ್ಕೆ ಸಿಕ್ಕ ಪ್ರತಿಫಲ

29 hkr 03
Published on

ಹಿರೇಕೆರೂರ: ಪಕ್ಷ ಸಂಘಟನೆಗಾಗಿ ನಿರಂತರವಾಗಿ ಶ್ರಮಿಸಿದ್ದರಿಂದ ನನ್ನ ಕಾರ್ಯವನ್ನು ಗುರುತಿಸಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರನ್ನಾಗಿ ನೇಮಿಸಲಾಗಿದ್ದು, ಪಕ್ಷದ ಆದೇಶದಂತೆ ಪಕ್ಷ ಸಂಘಟನೆಗೆ ಮತ್ತಷ್ಟು ದುಡಿಯುತ್ತನೆ ಎಂದು ಚನ್ನಳ್ಳಿ ಕ್ಷೇತ್ರದ ಜಿಪಂ ಸದಸ್ಯೆ, ಹಾವೇರಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸುಮಿತ್ರಾ ಪಾಟೀಲ ಹೇಳಿದರು.

ಹಾವೇರಿಯ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಅವರಿಂದ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಹುದ್ದೆಯ ಆದೇಶ ಪತ್ರವನ್ನು ಪಡೆದ ನಂತರ ಪತ್ರಿಕೆಯೊಂದಿಗೆ ಅವರು ಮಾತನಾಡಿದರು.

ಪಕ್ಷ ನನಗೆ ಯಾವುದೆ ಹುದ್ದೆಯನ್ನು ನೀಡಿದರೂ ಅದನ್ನು ಗೌರವಯುತವಾಗಿ ಸ್ವಿಕರಿಸಿ, ಅತ್ಯಂತ ಜವಬ್ದಾರಿಯಿಂದ ಪಕ್ಷದ ಏಳಿಗೆಗೆ ಶ್ರಮೀಸುತ್ತೇನೆ. ನನಗೆ ಈ ಅಧಿಕಾರ ನೀಡಿದ ಬಿಜೆಪಿಯ ಎಲ್ಲ ಪದಾಧಿಕಾರಿಗಳಿಗೆ, ಮಂತ್ರಿಗಳಿಗೆ, ಕಾರ್ಯಕರ್ತರಿಗೆ, ಮುಖಂಡರಿಗೆ ನಾನು ಕೃತಜ್ಞತೆ ತಿಳಿಸುತ್ತೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net