ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿರಲಿ

IMG-20240918-WA0196
Published on

ಶ್ರೀರಂಗಪಟ್ಟಣ : ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛತೆಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು. ಪರಿಸರ ಸ್ವಚ್ಛವಾಗಿದ್ದರೆ ನಾವು ಆರೋಗ್ಯವಂತರಾಗಿರಲು ಸಾಧ್ಯ ಎಂದು ತಾಲೂಕು ಹೆಚ್ಚುವರಿ ಆರೋಗ್ಯಾಧಿಕಾರಿ ಡಾ.ಡಿ.ಟಿ.ಮಂಜುನಾಥ ಹೇಳಿದರು.


ಪಟ್ಟಣದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಸ್ವಚ್ಛ ಭಾರತ ಅಭಿಯಾನದಡಿ ಸ್ವಚ್ಛತಾ ಹೀ ಸೇವಾ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.


ಸೆ.17ರಿಂದ ಅ.2ರ ವರೆಗೂ ಸ್ವಭಾವ ಸ್ವಚ್ಛತಾ-ಸಂಸ್ಕಾರ ಸ್ವಚ್ಛತಾ ಎಂಬ ಘೋಷವಾಕ್ಯದೊಂದಿಗೆ ದೇಶಾದ್ಯಂತ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪ್ರತಿದಿನವೂ ಸ್ವಚ್ಛತೆ ಎಂಬುದು ನಮ್ಮೆಲ್ಲರ ಆದ್ಯತೆಯಾಗಬೇಕು.

ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲ ಪರಿಸರ ಸ್ವಚ್ಛತೆಗೆ ಕಾಳಜಿ ವಹಿಸಬೇಕು. ತಾಲೂಕಿನ ಎಲ್ಲ ಆಯುಷ್ಮಾನ್ ಆರೋಗ್ಯ ಮಂದಿರಗಳ ಒಳಾಂಗಣ ಹಾಗೂ ಹೊರಾಂಗಣ ಸ್ವಚ್ಛತಾ ಸೇವೆಯನ್ನು ಅಧಿಕಾರಿಗಳಿಂದ ಹಿಡಿದು ಸಿಬ್ಬಂದಿ ಸಹಕಾರದೊಂದಿಗೆ ಹಮ್ಮಿಕೊಳ್ಳುವ ಜತೆಗೆ ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಸ್ವಚ್ಛತೆ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದರು.


ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಸ್ವಚ್ಛತೆಯ ಕುರಿತಾಗಿ ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಕಚೇರಿಯ ಆವರಣದ ಸುತ್ತಮುತ್ತ ಅಧಿಕಾರಿಗಳು ಹಾಗೂ ಸಿಬ್ಬಂದಿ ಶ್ರಮದಾನ ನಡೆಸಿದರು.


ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್, ಕಾರ್ಯಕ್ರಮ ವ್ಯವಸ್ಥಾಪಕ ಅಭಿನಂದನ್, ಹಿರಿಯ ಪ್ರಾಥಮಿಕ ಹೆಚ್ಚುವರಿ ಆರೋಗ್ಯ ಸುರಕ್ಷಾಧಿಕಾರಿ ಬಿ.ಮಂಗಳಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಬಿ.ಹೇಮಣ್ಣ, ಆರೋಗ್ಯ ನಿರೀಕ್ಷಣಾಧಿಕಾರಿ ಎಸ್.ಪಿ.ಪಣಿಂದ್ರ, ಎಂ.ಸಿ.ಚಂದನ್, ಆಶಾ ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net