

ಚಿತ್ರದುರ್ಗ: ನಮ್ಮ ಎಕ್ಸ್‌ಪರ್ಟ್ಸ್ ಪಿಯು ಕಾಲೇಜಿನಲ್ಲಿ ಮಂಗಳವಾರ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಅತ್ಯಂತ ಸಡಗರದಿಂದ ಶಿಕ್ಷಕರ ದಿನ ಆಚರಿಸಿದರು.
ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಂತರ ತಮ್ಮ ಪ್ರೀತಿಯ ಶಿಕ್ಷಕರಿಗೆ ಗುರುವಂದನೆ ಸಲ್ಲಿಸಿ, ಅಭಿಪ್ರಾಯ ಹಂಚಿಕೊಂಡರು. ಇದೇ ವೇಳೆ ಕಾಲೇಜು ಆಡಳಿತ ಮಂಡಳಿಯಿಂದಲೂ ಉಪನ್ಯಾಸಕರಿಗೆ ಗೌರವಿಸಲಾಯಿತು.