ನಮ್ಮ ಮೇಲಿನ ಜವಾಬ್ದಾರಿ ಮರೆಯದಿರಿ

oplus_1049632
oplus_1049632
Published on

ಸಿಂಧನೂರು: ತಾಲೂಕಿನಲ್ಲಿ ಮೂರು ತಿಂಗಳಿಗೊಮ್ಮೆ ಕನ್ನಡ ನಾಡು, ನುಡಿಗೆ ಸಂಬಂಧಿಸಿದ ಕಾರ್ಯಕ್ರಮ ಆಯೋಜಿಸುವ ಮೂಲಕ ಕನ್ನಡವನ್ನು ಇನ್ನಷ್ಟು ಅರಳಿಸುವ ಕೆಲಸವಾಗಬೇಕೆಂದು ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ನಗರದ ತಹಸಿಲ್ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದರು. ಕನ್ನಡ ಶ್ರೀಮಂತ ಭಾಷೆಯಾಗಿದ್ದು, ಅದನ್ನು ಉಳಿಸಿಕೊಂಡು ಹೋಗುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆನ್ನುವುದು ಮರೆಯಬಾರದು ಎಂದರು.

ಕಾಟಾಚಾರಕ್ಕೆ ಕನ್ನಡ ರಾಜ್ಯೋತ್ಸವ ಆಚರಿಸುವುದಕ್ಕಿಂತ ಮೂರು ತಿಂಗಳಿಗೊಮ್ಮೆ ಕನ್ನಡಕ್ಕೆ ಸಂಬಂಧಿಸಿದ ವಿಶೇಷ ಕಾರ್ಯಕ್ರಮ ಆಯೋಜಿಸುವ ಮೂಲಕ ಜನರಲ್ಲಿ ಕನ್ನಡತನ ಮೆರೆಸುವ ಕೆಲಸವಾಗಬೇಕು. ಇಂಥ ಕಾರ್ಯಕ್ರಮಗಳಿಗೆ ನಮ್ಮ ಸಂಪೂರ್ಣ ಸಹಕಾರ ಇದೆ ಎಂದು ಶಾಸಕ ಬಾದರ್ಲಿ ಹೇಳಿದರು.

ಎಂಎಲ್‌ಸಿ ಬಸನಗೌಡ ಬಾದರ್ಲಿ ಮಾತನಾಡಿ, ರಾಜ್ಯದಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ಸಿಗಬೇಕು. ಆಡಳಿತ ಭಾಷೆಯಾಗಿ ಕನ್ನಡ ಹೆಚ್ಚು ಪರಿಣಾಮಕಾರಿಯಾಗಬೇಕು ಎಂದರು.

ತಹಸೀಲ್ದಾರ್ ಅರುಣ್ ದೇಸಾಯಿ ಮಾತನಾಡಿ, ನಾಡು, ನುಡಿ, ಜಲ ಹಾಗೂ ಸಂಸ್ಕೃತಿ ಉಳಿವಿಗೆ ನಾವೆಲ್ಲ ಪಣ ತೊಡಬೇಕು. ನಮ್ಮ ಭಾಷೆಗೆ 2 ಸಾವಿರ ವರ್ಷಗಳ ಇತಿಹಾಸವಿದ್ದು ಕನ್ನಡವನ್ನು ರಾಜಮನೆತನಗಳು ಬೆಳೆಸಿವೆ. ಪಂಪನಿಂದ ಇಲ್ಲಿವರೆಗೆ ಅನೇಕ ಕವಿಗಳು ಕನ್ನಡ ಸಾಹಿತ್ಯ ರಚಿಸುವ ಮೂಲಕ ಭಾಷೆಯನ್ನು ಶ್ರೀಮಂತಗೊಳಿಸಿದ್ದಾರೆ ಎಂದರು.

ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಂಪಯ್ಯಸ್ವಾಮಿ ಸಾಲಿಮಠ, ನಗರಸಭೆ ಪೌರಾಯುಕ್ತ ಮಂಜುನಾಥ ಗುಂಡೂರು, ತಾಪಂ ಇಒ ಚಂದ್ರಶೇಖರ, ಡಿವೈಎಸ್‌ಪಿ ಬಿ.ಎಸ್.ತಳವಾರ, ಬಿಇಒ ವಾಜೀದ್ ಮಜೀದ್, ಸಾರಿಗೆ ಸಂಸ್ಥೆ ವ್ಯವಸ್ಥಾಪಕ ಪ್ರಕಾಶ ದೊಡ್ಡಮನಿ, ಬಿಸಿಎಂ ಅಧಿಕಾರಿ ಲಿಂಗಪ್ಪ, ಸಿಡಿಪಿಒ ಲಿಂಗನಗೌಡ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಹಿರೇಮಠ, ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಶ್ರೀದೇವಿ ಶ್ರೀನಿವಾಸ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net