ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ

IMG_20230607_103547
Published on

ವಿರಾಜಪೇಟೆ: ತಾಲೂಕಿನ ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿಯಲ್ಲಿ ಆರೋಗ್ಯ ಅಮೃತ ಅಭಿಯಾನದಡಿ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.


ದೇವಣಗೇರಿಯ ಕೃಷಿಪತ್ತಿನ ಸಹಕಾರ ಸಂಘದಲ್ಲಿ ಆಯೋಜಿಸಿದ್ದ ಶಿಬಿರವನ್ನು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ರಾಜು ಉದ್ಘಾಟಿಸಿದರು. ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಯನಿರ್ವಹಿಸುವ ಕೂಲಿ ಕಾರ್ಮಿಕರ ಆರೋಗ್ಯ ದೃಷ್ಟಿಯಿಂದ ಜಿಲ್ಲೆಯ ಎಲ್ಲ ನರೇಗಾ ಕೂಲಿ ಕಾರ್ಮಿಕರಿಗೆ ತಪಾಸಣೆ ನಡೆಸಲಾಯಿತು. ರಕ್ತ ಪರೀಕ್ಷೆ, ಮಧುಮೇಹ, ರಕ್ತದೊತ್ತಡ, ಟಿಬಿ, ಕಣ್ಣಿನ ಪರೀಕ್ಷೆ, ಹೃದಯ ಸಂಬಂಧಿತ ತಪಾಸಣೆ ಮಾಡಲಾಯಿತು. ಒಟ್ಟು 54 ಜನ ಕೂಲಿಕಾರ್ಮಿಕರು ತಪಾಸಣೆಗೆ ಒಳಗಾದರು.
ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮೂಕೊಂಡ ಉಮೇಶ್, ಸದಸ್ಯರಾದ ಟಿ.ಡಿ.ವಾಸು, ಕಾಂತಿ, ಚಂದ್ರಕಲಾ, ಕಿರಣ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net