ನರೇಗಾ ನೌಕರರ ನೆರವು

0302klb03
Published on


ಕಲಬುರಗಿಯಲ್ಲಿ ನಡೆಯುತ್ತಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಕಲಬುರಗಿ ಜಿಲ್ಲೆಯ ಹೊರಗುತ್ತಿಗೆ ನೌಕರರು 28000 ರೂ. ಗಳ ದೇಣಿಗೆ ಡಿ.ಡಿ.ಯನ್ನು ಜಿಲ್ಲಾ ಪಂಚಾಯಿತಿ ಸಿಇಒ ಡಾ. ರಾಜಾ ಪಿ. ಅವರಿಗೆ ಸೋಮವಾರ ಹಸ್ತಾಂತರಿಸಿದರು. ನರೇಗಾ ನೌಕರರಾದ ಡಿಪಿಎಂಯು ನಾಗರಾಜ, ರಾಜು ಒಂಟಿ, ಸಿದ್ಧರಾಮ ಕೆರೂರ್, ಸತೀಶ ಬೂದಿಹಾಳ, ಹರೀಶ ಸಾಹು, ಮೋಸಿನ್ ಇದ್ದರು.

ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಕಲಬುರಗಿ: ಸಮ್ಮೇಳನ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳ ಉಪನ್ಯಾಸಕರು, ಶಿಕ್ಷಕರು ಹಾಗೂ ಮಕ್ಕಳು ಈ ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ 5 ರಿಂದ 7ರವರೆಗೆ ಜಿಲ್ಲೆಯ ಎಲ್ಲ ಶಾಲಾ, ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net