ನರೇಗಾದಡಿ ಎಲ್ಲ ಸ್ಮಶಾನಗಳ ಅಭಿವೃದ್ಧಿ

JUN 02-HRP-01
Published on

ಹರಪನಹಳ್ಳಿ: ಉದ್ಯೋಗಖಾತ್ರಿ ಯೋಜನೆಯಡಿ ತಾಲೂಕಿನಲ್ಲಿರುವ ಎಲ್ಲ ಸ್ಮಶಾನಗಳ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಹೇಳಿದರು.

ಅರಸೀಕೆರೆ ಗ್ರಾಮದ ಕೋಲಶಾಂತೇಶ್ವರ ಮಠದಲ್ಲಿ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು. ತಾಲೂಕಿನ ಕೆಲವೆಡೆ ಸ್ಮಶಾನದ ಜಾಗ ಒತ್ತುವರಿ ಮಾಡಿಕೊಳ್ಳಲಾಗಿದೆ. ಮಳೆ ಬಂದಾಗ ಸ್ಮಶಾನ ಜಾಗದಲ್ಲಿ ನೀರು ನಿಂತು ಅಂತ್ಯಕ್ರಿಯೆಗೆ ತೊಂದರೆಯಾಗುತ್ತಿರುವ ದೂರು ಬಂದಿವೆ. ಈ ಸಮಸ್ಯೆಯನ್ನು ಒಂದು ವಾರದೊಳಗೆ ಸರಿಪಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಅರಸೀಕೆರೆಯಲ್ಲಿ ಬಸ್ ನಿಲ್ದಾಣದಲ್ಲಿ ಶೌಚಗೃಹ ನಿರ್ಮಿಸಲು ಸಾರ್ವಜನಿಕರಿಂದ ಮನವಿ ಬಂದಿದ್ದು, ಬಸ್ ನಿಲ್ದಾಣದ ಬಳಿ ಸುಸಜ್ಜಿತವಾದ ಶೌಚಗೃಹ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. 100 ಬಾಲಕಿಯರು ಇರುವ ಶಾಲೆಯಲ್ಲಿ ಕಡ್ಡಾಯವಾಗಿ ಶೌಚಗೃಹ ನಿರ್ಮಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿರುವೆ ಎಂದರು.

9/11 ಫಾರ್ಮ್‌ಗಳನ್ನು ಮನೆ ಬಾಗಿಲಿಗೆ ನೀಡಲು ಸೂಚಿಸಲಾಗಿದೆ. ಇಲ್ಲದಿದ್ದಲ್ಲಿ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲಾಗುವುದು. ಸಾರ್ವಜನಿಕ ಆಸ್ಪತ್ರೆಯಲ್ಲಿ ರಾತ್ರಿ ವೈದ್ಯರು ಇರುವುದಿಲ್ಲ ಎಂಬುದು ಸೇರಿದಂತೆ ಇತರ ಸಮಸ್ಯೆಗಳಿಗೆ ಸಂಬಂಧಿಸಿದ ದೂರುಗಳು ಬಂದಿವೆ ಎಂದು ಡಿಸಿ ಎಂ.ಎಸ್.ದಿವಾಕರ ತಿಳಿಸಿದರು.

ಜಗಳೂರು ಶಾಸಕ ಬಿ.ದೇವೇಂದ್ರಪ್ಪ ಮಾತನಾಡಿ, ಗ್ರಾಮೀಣ ಭಾಗದಲ್ಲಿ ನೂರಾರು ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಸಾರ್ವಜನಿಕರು ಪಟ್ಟಣಕ್ಕೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಅರಸೀಕೆರೆಯಲ್ಲಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು. ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ತಹಸೀಲ್ದಾರ್ ಬಿ.ವಿ.ಗಿರೀಶ್ ಬಾಬು, ತಾಪಂ ಇಒ ಚಂದ್ರಶೇಖರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net