ನುಲಿಯ ಚಂದಯ್ಯ, ನಾರಾಯಣಗುರು ಜಯಂತಿ

CTD 21 NULIGI CHANDAIH (2)
Published on

ಚಿತ್ರದುರ್ಗ: ಆ.31ರಂದು ನುಲಿಯ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಚಿತ್ರದುರ್ಗದಲ್ಲಿ ಪ್ರತ್ಯೇಕವಾಗಿ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಎಡಿಸಿ ಬಿ.ಟಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಜಿಲ್ಲಾಡಳಿತ, ಜಿಪಂ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತಿತರ ಇಲಾಖೆಗಳ ಸಹಯೋಗದಲ್ಲಿ ಅಂದು ಈ ಮಹನೀಯರ ಜಯಂತಿ ಆಚರಿಸಲಾಗುವುದು ಎಂದು ತಿಳಿಸಿದರು.

31ರ ಮಧ್ಯಾಹ್ನ 1ಗಂಟೆಗೆ ತರಾಸು ರಂಗಮಂದಿರದಲ್ಲಿ ನುಲಿಯ ಚಂದಯ್ಯ ಜಯಂತಿ ಏರ್ಪಡಿಸಲಾಗುವುದು. ಅಂದು ಬೆಳಗ್ಗೆ 10ಕ್ಕೆ ನಗರದ ನೀಲಕಂಠೇಶ್ವರ ದೇವಾಲಯದಿಂದ ರಂಗಮಂದಿರದವರೆಗೆ ಮೆರವಣಿಗೆ ಇರುತ್ತದೆ. ನುಲಿಯ ಚಂದಯ್ಯ ಅವರ ಕುರಿತು ಉಪನ್ಯಾಸವಿರುತ್ತದೆ ಎಂದರು.

31ರ ಬೆಳಗ್ಗೆ 11ಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಜಿಲ್ಲಾ ಆರ್ಯ ಈಡಿಗರ ಸಂಘದ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಲಾಗಿದೆ ಎಂದು ಹೇಳಿದರು.

ಕೊರಚ ಕೊರಮ ಸಮಾಜದ ಮುಖಂಡರಾದ ಕೆ.ಕೃಷ್ಣಪ್ಪ, ದಾರುಕೇಶ್, ರಾಮಪ್ಪ, ತಿಪ್ಪೇಸ್ವಾಮಿ, ಪರಮೇಶ್ವರಪ್ಪ, ಶಿವಮೂರ್ತಿ, ವೈ. ಕುಮಾರ್, ಧನಂಜಯ, ಹನುಮಂತಪ್ಪ, ಹುಚ್ಚಪ್ಪ, ಮಂಜುನಾಥ್, ಪುಷ್ಪರಾಜ್, ಪಿಐ ನಯೀಂ ಅಹ್ಮದ್, ಆರ್ಯ ಈಡಿಗರ ಸಮಾಜದ ಮುಖಂಡರಾದ ಎಚ್.ಜೀವನ್, ಮಂಜುನಾಥ್, ಶಿವಮಂಜುನಾಥ್, ಡಿ.ಸ್ವಾಮಿ, ಮಹಾರುದ್ರಪ್ಪ, ವೆಂಕಟೇಶ್, ಶ್ರೀನಿವಾಸ್, ರಂಗಕರ್ಮಿ ಕೆಪಿಎಂ ಗಣೇಶಯ್ಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಸಮಾಜದ ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net