ನವಜಾತ ಶಿಶು ವಾರಸುದಾರರ ಪತ್ತೆಗೆ ಸಹಕರಿಸಿ

17.npk-4..
Published on

ನಾಪೋಕ್ಲು: ಸಮೀಪದ ಬಲ್ಲಮಾವಟ್ಟಿ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಪೊಲೀಸರ ವತಿಯಿಂದ ನವಜಾತ ಶಿಶು ವಾರಸುದಾರರ ಪತ್ತೆಗೆ ಸಮುದಾಯ ಆರೋಗ್ಯ ಅಧಿಕಾರಿ ಸಿಬ್ಬಂದಿ ಸಭೆ ಏರ್ಪಡಿಸಲಾಗಿತ್ತು.

ನಾಪೋಕ್ಲು ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಮಾತನಾಡಿ, ಪೇರೂರು ಗ್ರಾಮದಲ್ಲಿ ಶನಿವಾರ ರಾತ್ರಿ ನವಜಾತ ಶಿಶು ಪತ್ತೆಯಾಗಿದೆ. ಮಗುವಿನ ವಾರಸುದಾರರ ಪತ್ತೆ ಕಾರ್ಯ ಕೈಗೊಂಡಿದ್ದು, ಯಾರಿಗಾದರೂ ಮಾಹಿತಿ ಸಿಕ್ಕಲ್ಲಿ ಮೊ.9480804948 ಗೆ ಕರೆ ಮಾಡಿ ಮಾಹಿತಿ ನೀಡಲು ಕೋರಿದರು. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ಅಪರಾಧಿಗಳನ್ನು ಪತ್ತೆ ಹಚ್ಚುವ ಬಗ್ಗೆ ಎಲ್ಲರೂ ಸಹಕರಿಸುವಂತೆ ಸೂಚಿಸಿದರು.

ಈ ಸಂದರ್ಭ ಹೆಣ್ಣು ಮಕ್ಕಳ ಸುರಕ್ಷತೆ ಹಾಗೂ ಹೆಣ್ಣು ಮಕ್ಕಳಿಗೆ ಸಂಬಂಧಿಸಿದ ಕಾಯ್ದೆ, ಕಾನೂನುಗಳ ಬಗ್ಗೆ ಅರಿವು ಮೂಡಿಸಲಾಯಿತು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೌರಿರ ಶರತ್, ನೇತಾಜಿ ಪ್ರೌಢಶಾಲೆಯ ಶಿಕ್ಷಕ ರವಿ ಪೂಜಾರ್, ಬಲ್ಲಮಾವಟ್ಟಿ ಮಿಲನ , ಕೋರಂಗಾಲದ ಜೀವಿತಾ, ಅಯ್ಯಂಗೇರಿಯ ಮಿಲನ , ಆಶಾ ಕಾರ್ಯಕರ್ತೆ ನಂದಿನಿ, ಪೂವಮ್ಮ, ಸವಿತಾ, ಅಂಗನವಾಡಿ, ಪೋಲಿಸ ಸಿಬ್ಬಂದಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net