ನವಲಿ ಜಲಾಶಯ ನಿರ್ಮಾಣಕ್ಕಾಗಿ ಅಗತ್ಯ ಕ್ರಮ

30 YERRISWAMY 03
Published on

ಬಳ್ಳಾರಿ : ಬೆಂಗಳೂರಿನಲ್ಲಿ ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಮೇಲ್ಮನೆಯಲ್ಲಿ ನವಲಿ ಬಳಿ ತುಂಗಭದ್ರ ಜಲಾಶಯಕ್ಕೆ ಸಮಾನಾಂತರ ಜಲಾಶಯ ನಿರ್ಮಾಣದ ಕುರಿತು ಕೇಳಿದ ಪಶ್ನೆಗೆ ಡಿಸಿಎಂ ಡಿ.ಕೆ. ಶಿವಕುಮಾರ ಮಾತನಾಡಿ, ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ತೆಲಂಗಾಣ, ಆಂಧ್ರಪ್ರದೇಶ ಸರ್ಕಾರಗಳ ಒಪ್ಪಿಗೆ ಪಡೆಯಬೇಕು. ಅಲ್ಲದೇ, ತುಂಗಭದ್ರ ಮಂಡಳಿಯ ಅನುಮೋದನೆ ಪಡೆದು ಕಾಮಗಾರಿಯನ್ನು ಪ್ರಾರಂಭಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸರ್ಕಾರದ ಹಂತದಲ್ಲಿ ಪ್ರಯತ್ನಗಳು ನಡೆದಿವೆ. ನವಲಿ ಬಳಿ 7,657 ಹೆಕ್ಟೇರ್ ಭೂ ಪ್ರದೇಶದಲ್ಲಿ 30 ಟಿಎಂಸಿ ಪ್ರಮಾಣದ ನೀರು ಸಂಗ್ರಹ ಮಾಡಲು ವಿನ್ಯಾಸ ರೂಪಿಸಲಾಗಿದೆ. ಭೂ ಸ್ವಾಧೀನಕ್ಕಾಗಿ 3783 ಕೋಟಿ ರೂ. ವೆಚ್ಚವಾಗಲಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ ಎಂದು ಉತ್ತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net