

ಬೈಲುಕುಪ್ಪೆ: ಪಿರಿಯಾಪಟ್ಟಣ ತಾಲೂಕಿನ ನವಿಲೂರು ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮದ ಅಂಗನವಾಡಿ ಕೇಂದ್ರದ ಆವರಣದಲ್ಲಿ ಮಂಗಳವಾರ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಅಂಗನವಾಡಿ ಕೇಂದ್ರದ ಸುತ್ತಮುತ್ತ ಗಿಡಗಂಟಿಗಳನ್ನು ಕಿತ್ತು ಸ್ವಚ್ಛತೆ ನಡೆಸಿ ಅರಿವು ಮೂಡಿಸಿ ನಂತರ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಯಶೋದಮ್ಮ, ಉಪಾಧ್ಯಕ್ಷೆ ಶಾಂತಮ್ಮ, ಪಿಡಿಒ ಟಿ.ರವಿ, ಗ್ರಾಮ ಪಂಚಾಯಿತಿ ಸದಸ್ಯರಾದ ಮಹದೇವ್, ಚೆಲುವರಾಜ್, ಸರೋಜಾ, ಮಂಜುಳಾ, ಅಂಗನವಾಡಿ ಶಿಕ್ಷಕಿಯರಾದ ಶೋಭಾ, ಕುಮಾರಿ, ರಿಹಾನುಭಾನು, ಗಿರಿಜಾ, ಪುಟ್ಟಲಕ್ಷ್ಮೀ, ಆಶಾ ಕಾರ್ಯಕರ್ತರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಇದ್ದರು.