ನವೋದಯ ಪರೀಕ್ಷೆಗೆ ಪ್ರವೇಶ ಪತ್ರ ಪಡೆದುಕೊಳ್ಳಲು ಸೂಚನೆ

Published on

ಚಾಮರಾಜನಗರ: ತಾಲೂಕಿನ ಹೊಂಡರಬಾಳುವಿನಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿನ 6ನೇ ತರಗತಿ ದಾಖಲಾತಿಗಾಗಿ ಜ.18ರಂದು (ಬೆಳಗ್ಗೆ 11.30 ರಿಂದ ಮಧ್ಯಾಹ್ನ 1.30ರವರೆಗೆ) ನಡೆಯುವ ಪ್ರವೇಶ ಪರೀಕ್ಷೆಗೆ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಮೀಸಲಾತಿಯು ಕೇಂದ್ರ ಸರ್ಕಾರದ ನಿಯಮದಂತೆ ಅನ್ವಯವಾಗಲಿದೆ. ವೆಬ್‌ಸೈಟ್ ಮೂಲಕ ಉಚಿತವಾಗಿ ಪ್ರವೇಶ ಪತ್ರವನ್ನು ಪಡೆಯ ಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ನೋಡಬಹುದು ಮತ್ತು ಸಹಾಯವಾಣಿ ಸಂ. 9742476738, 9008259934, 9964932482 ಸಂಪರ್ಕಿಸುವಂತೆ ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net