ನಾಗನಹಳ್ಳಿ ಗ್ರಾ.ಪಂ.ಗೆ ನೂತನ ಉಪಾಧ್ಯಕ್ಷರ ಆಯ್ಕೆ

31HDK1
ಎಚ್.ಡಿ.ಕೋಟೆ ತಾಲೂಕಿನ ನಾಗನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಲಕ್ಷ್ಮೀ ಕುಮಾರ್ ಅವರನ್ನು ಗಣ್ಯರು ಅಭಿನಂದಿಸಿದರು.
Published on

ಎಚ್.ಡಿ.ಕೋಟೆ: ನಾಗನಹಳ್ಳಿ ಗ್ರಾಮ ಪಂಚಾಯಿತಿ ನೂತನ ಉಪಾಧ್ಯಕ್ಷರಾಗಿ ಲಕ್ಷ್ಮೀ ಕುಮಾರ್ ಅವಿರೋಧ ಆಯ್ಕೆಯಾದರು.

ಗುರುವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮೀ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ, ಚುನಾವಣಾಧಿಕಾರಿ ಕೃಷ್ಣಯ್ಯ ಅವಿರೋಧ ಆಯ್ಕೆ ಘೋಷಣೆ ಮಾಡಿದರು.
ನೂತನವಾಗಿ ಆಯ್ಕೆಯಾದ ಉಪಾಧ್ಯಕ್ಷರನ್ನು ಗ್ರಾಮ ಪಂಚಾಯತಿ ಅಧ್ಯಕ್ಷ ಕೆಂಡಗಣ್ಣ ಸ್ವಾಮಿ ಹಾಗೂ ಸದಸ್ಯರು ಅಭಿನಂದಿಸಿದರು.

ಜಿ.ಪಂ. ಮಾಜಿ ಸದಸ್ಯ ವೆಂಕಟಸ್ವಾಮಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹೆಗಡಾಪುರ ಚಂದ್ರು, ಜೆಡಿಎಸ್ ಮುಖಂಡ ಜಯಪ್ರಕಾಶ್ ಚಿಕ್ಕಣ್ಣ, ಅಕ್ರಮ ಸಕ್ರಮ ಸಮಿತಿ ಸದಸ್ಯ ಮೊತ್ತ ಬಸವರಾಜಪ್ಪ, ಚಾ.ನಂಜುಂಡ ಮೂರ್ತಿ, ಜಗದೀಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net