ನಾಗರಾಜ, ವಿಜಯ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆ

01
Published on

ಸವದತ್ತಿ: ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಇಲ್ಲಿನ ಕೆಎಲ್‌ಇ ಸಂಸ್ಥೆಯ ಎಸ್‌ವಿಎಸ್ ಬೆಳ್ಳುಬ್ಬಿ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಪುರುಷರ ಖೋಖೋ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಮಹಾವಿದ್ಯಾಲಯದ ಬಿಎ ಪ್ರಥಮ ವರ್ಷದ ವಿದ್ಯಾರ್ಥಿಗಳಾದ ನಾಗರಾಜ ಗುಡಗಾರ ಮತ್ತು ವಿಜಯ ಗಳಗಿನ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿದ್ದಾರೆ.

ತಮಿಳುನಾಡಿನ ತಿರುವರೂರಿನ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಡಿ.27ರಿಂದ 31ರ ವರೆಗೆ ಜರುಗುವ ದಕ್ಷಿಣ ಭಾರತ ಅಂತರ್ ವಿಶ್ವವಿದ್ಯಾಲಯಗಳ ಖೋ ಖೋ ಪಂದ್ಯಾಟದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ತಂಡ ಪ್ರತಿನಿಧಿಸಲಿದ್ದಾರೆ.

ಕೆಎಲ್‌ಇ ಸಂಸ್ಥೆಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ, ಅಧ್ಯಕ್ಷ ಮಹಾಂತೇಶ ಕೌಜಲಗಿ, ನಿರ್ದೇಶಕ ಜಯಾನಂದ ಮುನವಳ್ಳಿ, ಕೆಎಲ್‌ಇ ಸಂಸ್ಥೆಯ ಪದವಿ ಕಾಲೇಜುಗಳ ಸಂಯೋಜಕ ಡಾ.ಎಂ.ಪಿ. ಸತೀಶ ಮತ್ತು ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ವಿರುಪಾಕ್ಷಣ್ಣ ಮಾಮನಿ, ಸದಸ್ಯರಾದ ಬಿ.ವಿ. ಮಲಗೌಡರ, ಉಮೇಶ ಬಾಳಿ ಹಾಗೂ ಪ್ರಾಚಾರ್ಯ ಡಾ.ಎನ್.ಆರ್. ಸವತೀಕರ, ಕ್ರೀಡಾ ವಿಭಾಗದ ಉಪಾಧ್ಯಕ್ಷ ಪ್ರೊ.ಕೆ.ರಾಮರೆಡ್ಡಿ, ಕಾಲೇಜು ಒಕ್ಕೂಟದ ಕಾರ್ಯಾಧ್ಯಕ್ಷ ಡಾ.ಎ.ಎ್. ಬದಾಮಿ, ಐಕ್ಯೂಎಸಿ ಸಂಯೋಜಕ ಪ್ರೊ.ಎ.ಎ. ಹಳ್ಳೂರ, ಡಾ. ಆರುಂಧತಿ ಬದಾಮಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net