ಕೊಪ್ಪಳ: ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಕೊಪ್ಪಳ ಮೀಡಿಯಾ ಕ್ಲಬ್ ಕೊಪ್ಪಳದಿಂದ ನಗರದ ಸಾಹಿತ್ಯ ಭವನದಲ್ಲಿ ನ.16ರ ಸಂಜೆ 5 ಗಂಟೆಗೆ "ಸಬ್ ಎಡಿಟರ್ ಸುಬ್ರಾಯ ಸತ್ತ ಮೇಲೆ' ನಾಟಕ ಪ್ರದರ್ಶನವಿದೆ.
ಪತ್ರಕರ್ತ ಶರತ್ ಹೆಗ್ಡೆ ನಾಟಕ ರಚಿಸಿದ್ದಾರೆ. ರಂಗ ಶಿಕ್ಷಕ ಗುರುರಾಜ್ ಎಲ್ ನಿರ್ದೇಶಿಸಿದ್ದಾರೆ. ಎಲ್ಲರಿಗೂ ಉಚಿತ ಪ್ರವೇಶವಿದೆ.
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸದ ರಾಜಶೇಖರ ಹಿಟ್ನಾಳ, ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ, ವಿಧಾನಸಭೆ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ಶಾಸಕರಾದ ರಾವೇಂದ್ರ ಹಿಟ್ನಾಳ, ಗಾಲಿ ಜನಾರ್ದನ ರೆಡ್ಡಿ, ಡಿಸಿ ನಲಿನ್ ಅತುಲ್, ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ, ಎಸ್ಪಿ ಡಾ.ರಾಮ್ ಎಲ್.ಅರಸಿದ್ದಿ, ಮುನಿರಾಬಾದ್ ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ ಅತಿಥಿಗಳಾಗಿ ಭಾಗವಹಿಸುವರು.
ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್, ಮಾಜಿ ಸಂಸದ ಸಂಗಣ್ಣ ಕರಡಿ, ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ. ಚಂದ್ರಶೇಖರ್, ರಾಜ್ಯ ಪ್ರಧಾನ ಕಾರ್ಯದರ್ಶಿ ವೀರೇಶ ಮಹಾಂತಯ್ಯನಮಠ, ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್, ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಡೊಳ್ಳಿನ, ಕೊಪ್ಪಳ ವಾರ್ತಾಧಿಕಾರಿ ಜಿ. ಸುರೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ ಗುಪ್ತಾ, ಉಪಸ್ಥಿತರಿರುವರು.