ನಾಡಿನಲ್ಲಿ ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿ ವೇಗ ಹೆಚ್ಚಳ

yelburga bjp halappa
ಯಲಬುರ್ಗಾದ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳ ಕಿರು ಪುಸ್ತಕ ಬಿಡುಗಡೆಗೊಳಿಸಲಾಯಿತು. ಸಚಿವ ಹಾಲಪ್ಪ ಆಚಾರ್, ಪ್ರಮುಖರಾದ ಬಸಲಿಂಗಪ್ಪ ಭೂತೆ, ಸಿ.ಎಚ್.ಪಾಟೀಲ್, ಅರವಿಂದಗೌಡ ಪಾಟೀಲ್ ಇತರರಿದ್ದರು.
Published on

ಯಲಬುಗಾ: ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ನಾಡಿನಲ್ಲಿ ಅಭಿವೃದ್ಧಿ ವೇಗ ಹೆಚ್ಚಿದೆ ಎಂದು ಬಿಜೆಪಿ ಅಭ್ಯರ್ಥಿ ಹಾಲಪ್ಪ ಆಚಾರ್ ಹೇಳಿದರು.

ಭಾರತ ವಿಶ್ವಕ್ಕೆ ಮಾದರಿ

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳ ಕಿರು ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅನೇಕ ಬದಲಾವಣೆ ತರುವ ಮೂಲಕ ಭಾರತ ವಿಶ್ವಕ್ಕೆ ಮಾದರಿಯಾಗಿದೆ. ಜನಪರ ಯೋಜನೆ ಜಾರಿಗೆ ತರುವ ಮೂಲಕ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಕೆಲ ಐತಿಹಾಸಿಕ ನಿರ್ಧಾರಗಳಿಂದ ದೇಶಕ್ಕೆ ಉಜ್ವಲ ಭವಿಷ್ಯ ಸೃಷ್ಟಿಯಾಗಿದೆ ಎಂದರು.

ಸಿಎಂ ಬೊಮ್ಮಾಯಿ ಜನಸಾಮಾನ್ಯರ ಶ್ರೇಯಸ್ಸಿಗೆ ಪ್ರಾಮಾಣಿಕ ಪ್ರಯತ್ನ

ರಾಜ್ಯದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಜನಸಾಮಾನ್ಯರ ಶ್ರೇಯಸ್ಸಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಈ ಸಲ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ. ಕಳೆದ ಚುನಾವಣೆಯಲ್ಲಿ ಕ್ಷೇತ್ರದ ಮತದಾರರಿಗೆ ಕೊಟ್ಟ ಮಾತಿನಂತೆ ಕೃಷ್ಣೆಯ ನೀರನ್ನು ತಾಲೂಕಿನ ಕೆರೆಗಳಿಗೆ ಹರಿಸುವ ಕೆಲಸ ಮಾಡಲಾಗಿದೆ. ಕ್ಷೇತ್ರದ ಸಂಪೂರ್ಣ ನೀರಾವರಿಗೆ ಶ್ರಮಿಸಲಾಗುವುದು ಎಂದರು.

ಪ್ರಮುಖರಾದ ಬಸಲಿಂಗಪ್ಪ ಭೂತೆ, ಸಿ.ಎಚ್.ಪಾಟೀಲ್, ಶಿವಪ್ಪ ವಾದಿ, ರತನ್ ದೇಸಾಯಿ, ವೀರಣ್ಣ ಹುಬ್ಬಳ್ಳಿ, ಪ್ರಭುರಾಜ ಕಲಬುರಗಿ, ಅಯ್ಯನಗೌಡ ಕೆಂಚಮ್ಮನವರ, ಶಂಭು ಜೋಳದ್, ಬಸನಗೌಡ ತೊಂಡಿಹಾಳ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net