ಚಾಮರಾಜನಗರ: ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಜುಲೈನಲ್ಲಿ ನಡೆಯುವ ನಾನು ವಿಜ್ಞಾನಿ -2025 ಕಾರ್ಯ ಕ್ರಮದಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ 8ನೇ ತರಗತಿಯಿಂದ ಪಿಯುಸಿ ವಿದ್ಯಾರ್ಥಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹತ್ತಿರದ ಬ್ಯಾಸೆಂಟ ಉದ್ಯಾನವನ (ಸೌಟ್ ಕ್ಯಾಂಪ್)ದಲ್ಲಿ ಟೆಲಿಸ್ಕೋಪ್ ತಯಾರಿಸುವ 8 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಶಾಲಾ-ಕಾಲೇಜಿನ ವಿಜ್ಞಾನದಲ್ಲಿ ಆಸಕ್ತ ಇರುವ ವಿದ್ಯಾರ್ಥಿಯನ್ನು ಆಯ್ಕೆ ಮಾಡಿ ತರಬೇತಿಗೆ ಕಳುಹಿಸಿ ಕೊಡಲು ಕೋರಿದ್ದಾರೆ. ವಿದ್ಯಾರ್ಥಿಗಳು ತಯಾರಿಸಿದ ಟೆಲಿಸ್ಕೋಪ್ ಅನ್ನು ಬೆಂಗಳೂರಿನ ವಿಧಾನಸೌಧದಲ್ಲಿ ಪ್ರದರ್ಶನ ಮಾಡಲಾಗುವುದು. ಕಾರ್ಯಕ್ರಮಕ್ಕೆ ಲಿಮ್ಕ್ ಗಿನ್ನಿಸ್, ಇಂಡಿಯನ್ ಬುಕ್ ಆಫ್ ದಾಖಲೆ ಮಾಡಿಸಲು ಸಂಬಂಧಿಸಿದ ಕಂಪನಿ ಆಗಮಿಸುತ್ತಿದ್ದು, ಅಂದು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಗುವುದು.
ಆಸಕ್ತ ವಿದ್ಯಾರ್ಥಿಗಳು ಹಾಗೂ ಶಾಲೆಯ ಮುಖ್ಯ ಶಿಕ್ಷಕರು, ವಿಜ್ಞಾನ ಶಿಕ್ಷಕರು ವಿದ್ಯಾರ್ಥಿಗಳ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವೈಜ್ಞಾನಿಕ ಸಂಶೋಧನಾ ಪರಿಷತ್ ಅಧ್ಯಕ್ಷ ಎಂ.ಕಿರಣ್‌ರಾಜ್ ಮೊ.9972962224 ಗೆ ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಕೋರಿದೆ.